ನಗರ ಜೀವನದಿಂದ ಜಿಗುಪ್ಸೆಗೊಂಡ ಪ್ಯಾಟೆ ಹುಡುಗಿ ಹಳ್ಳಿಯಲ್ಲಿ ಆತ್ಮಹತ್ಯೆಗೆ ಶರಣು

ಈ ಸುದ್ದಿಯನ್ನು ಶೇರ್ ಮಾಡಿ

sucide
ಮಂಡ್ಯ, ಏ.29-ಹೈಟೆಕ್ ಸಿಟಿಯ ಜೀವನದಿಂದ ಜಿಗುಪ್ಸೆಗೊಂಡ ಪ್ಯಾಟೆ ಹುಡುಗಿ ಹಳ್ಳಿಗೆ ಬಂದು ವಿಷ ಕುಡಿದು ಆತ್ಯಹತ್ಯೆ ಮಾಡಿಕೊಂಡಿರುವ ಘಟನೆ ಬೆಸಗರ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿರುವ ಪ್ಯಾಟೆ ಹುಡುಗಿಯನ್ನು ಬೆಂಗಳೂರಿನ ಜಯನಗರ ನಿವಾಸಿ ಶಿಶಿರಾ (24) ಎಂದು ಗುರುತಿಸಲಾಗಿದೆ.

ಬೆಂಗಳೂರಿನಿಂದ ಕಾರಿನಲ್ಲಿ ಬಂದಿದ್ದ ಶಿಶಿರಾ ಮದ್ದೂರು ತಾಲೂಕು ಬೆಸಗರಹಳ್ಳಿ ಠಾಣಾ ವ್ಯಾಪ್ತಿಯ ಗೊಲ್ಲರದೊಡ್ಡಿ ಸಮೀಪ ಕಾರು ನಿಲ್ಲಿಸಿ ಕಾರಿನ ಡೋರ್ ಓಪನ್ ಮಾಡಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ಧಾಳೆ. ಸಾಯುವ ಮುನ್ನ ಡೆತ್ ನೋಟ್ ಬರೆದಿಟ್ಟಿರುವ ಶಿಶಿರಾ ಜೀವನ ಸಾಕಾಗಿದೆ ಹೀಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆದಿಟ್ಟಿದ್ದಾರೆ. ಡೋರ್ ಓಪನ್ ಆದ ಕಾರಿನಲ್ಲಿ ಶವವಿರುವುದನ್ನು ಕಂಡ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿದ ಬೆಸಗರಹಳ್ಳಿ ಪೊಲೀಸರು ಮದ್ದೂರು ಸರ್ಕಾರಿ ಆಸ್ಪತ್ರೆಯಲ್ಲಿ ಶವ ಪರೀಕ್ಷೆ ನಡೆಸಿ ಮೃತದೇಹವನ್ನು ಪೊೀಷಕರಿಗೆ ಒಪ್ಪಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಬೆಸಗರ ಹಳ್ಳಿ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Facebook Comments

Sri Raghav

Admin