ನಟಿ ಭಾವನಾಗೆ ಲೈಂಗಿಕ ಕಿರುಕುಳ : ಏಳು ದುಷ್ಕರ್ಮಿಗಳು ಪೊಲೀಸರ ವಶಕ್ಕೆ

ಈ ಸುದ್ದಿಯನ್ನು ಶೇರ್ ಮಾಡಿ

bhavana
ಕೊಚ್ಚಿ, ಫೆ.19- ದಕ್ಷಿಣ ಭಾರತದ ಖ್ಯಾತ ನಟಿ ಭಾವನಾರನ್ನು ಅಪಹರಿಸಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.ಈ ದುಷ್ಕೃತಿಯ ಬಗ್ಗೆ ನಟಿ ಭಾವನಾ ಪೊಲೀಸರಿಗೆ ದೂರು ನೀಡಿದ ನಂತರ ಅವರ ಕಾರು ಚಾಲಕನನ್ನು ನಿನ್ನೆ ರಾತ್ರಿ ಪೊಲೀಸರು ವಶಕ್ಕೆ ತೆಗೆದುಕೊಂಡರು. ನಂತರ ಆತನಿಂದ ಪಡೆದ ಮಾಹಿತಿ ಮೇರೆಗೆ ಕೆಲವರನ್ನು ಕಸ್ಟಡಿಗೆ ಪಡೆಯಲಾಗಿದೆ.ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳ ಸಿನಿಮಾಗಳಲ್ಲಿ ನಾಯಕಿಯಾಗಿ ನಟಿಸಿ ಜನಪ್ರಿಯತೆ ಪಡೆದಿದ್ದ ಭಾವನಾರನ್ನು ದುಷ್ಕರ್ಮಿಗಳು ಅಪಹರಿಸಿ ಲೈಂಗಿಕ ಕಿರುಕುಳ ನೀಡಿದ್ದರು.ಶುಕ್ರವಾರ ರಾತ್ರಿ 8.30ರ ಸುಮಾರಿಗೆ ಚಿತ್ರೀಕರಣ ಮುಗಿಸಿ ತ್ರಿಶೂಲಿನಿಂದ ಎರ್ನಾಕುಲಂ ಮೂಲಕ ನೆಡುಂಬಾಶೆರಿ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ನಟಿಯನ್ನು ಅಪಹರಿಸಿ ಲೈಂಗಿಕ ಕಿರುಕುಳ ನೀಡಲಾಗಿತ್ತು.

 

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin