ನಟ ಅಶೋಕ್ ಬಾದರ ದಿನ್ನಿ ವಿಧಿವಶ

ಈ ಸುದ್ದಿಯನ್ನು ಶೇರ್ ಮಾಡಿ

Ashok-Badaladinni

ಬೆಂಗಳೂರು,ನ.24- ರಂಗಭೂಮಿ ಹಾಗೂ ಚಲನಚಿತ್ರಗಳಲ್ಲಿ ಹಾಸ್ಯನಟರಾಗಿದ್ದ ಕಲಾವಿದ ಅಶೋಕ ಬಾದರದಿನ್ನಿ ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ. 1970ರಿಂದ ಹಲವಾರು ಕ್ರೆಜಿಸ್ಟಾರ್ ರವಿಚಂದ್ರನ್ ಸೇರಿದಂತೆ ಹಲವಾರು ಮೇರು ನಟರ ಜತೆ ಬಹಳಷ್ಟು ಚಿತ್ರಗಳಲ್ಲಿ ನಟಿಸಿದ್ದ ಅಶೋಕ್, ರಂಗಭೂಮಿಯಲ್ಲೂ ಹೆಸರು ಮಾಡಿದ್ದರು. ಸಾಕಷ್ಟು ಸ್ನೇಹ ಬಳಗವನ್ನು ಹೊಂದಿದ್ದ ಅವರು, ಹಲವರನ್ನು ಕಲಾವಿದರನ್ನಾಗಿ ರೂಪಿಸಿದ ಹೆಗ್ಗಳಿಕೆಯೂ ಇದೆ.  ಚಿತ್ರದುರ್ಗದಲ್ಲಿ ನೆಲೆಸಿದ್ದ ಅವರು ಕಳೆದ ಹಲವು ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಆದರೆ ಕಳೆದ ರಾತ್ರಿ ವಿಧಿವಶರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿದೆ.

ಇಂದು ಅವರ ನಿವಾಸಕ್ಕೆ ಹಲವಾರು ಕಲಾವಿದರು ಭೇಟಿ ನೀಡಿ ಹಿರಿಯ ಚೇತನ ಅಗಲಿಕೆಗೆ ಕಂಬನಿ ಮಿಡಿದಿದ್ದಾರೆ. ಇಂದು ಸಂಜೆ ಚಿತ್ರದುರ್ಗದ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಅಶೋಕ್ ಅವರ ಪುತ್ರ ಪ್ರಕಾಶ್ ತಿಳಿಸಿದ್ದಾರೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ಕರ್ನಾಟಕ ನಾಟಕ ಅಕಾಡೆಮಿ ಸೇರಿದಂತೆ ಹಲವು ಸಂಘ ಸಂಸ್ಥೆಗಳು, ಗಣ್ಯರು ಅಶೋಕ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin