ನಡೆದಾಡುವ ದೇವರ ಆರೋಗ್ಯದಲ್ಲಿ ಚೇತರಿಕ, ಆಸ್ಪತ್ರೆಯಿಂದ ಡಿಸ್ಜಾರ್ಜ್

ಈ ಸುದ್ದಿಯನ್ನು ಶೇರ್ ಮಾಡಿ

Shivakumar-Swamiji-01

ತುಮಕೂರು, ಸೆ.22- ನಡೆದಾಡುವ ದೇವರು, ತ್ರಿವಿಧ ದಾಸೋಹಿ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ ಆರೋಗ್ಯದಲ್ಲಿ ಕೊಂಚ ವ್ಯತ್ಯಯವಾದ ಕಾರಣ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಇಂದು ಡಿಸ್ಜಾರ್ಜ್ ಆಗಿ ಮಠಕ್ಕೆ ತೆರಳಿದರು. ಸ್ವಾಮೀಜಿಯವರಿಗೆ ಶೀತ, ಜ್ವರ, ಕಫ ಹಾಗೂ ಪಿತ್ತನಾಳದ ಸಮಸ್ಯೆ ಕಾಣಿಸಿಕೊಂಡಿದ್ದು, ಚಿಕಿತ್ಸೆಗಾಗಿ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಲವಲವಿಕೆಯಿಂದ ಇದ್ದ ಅವರು ಇಂದು ಮುಂಜಾನೆ ಆಸ್ಪತ್ರೆಯಲ್ಲಿಯೇ ಶಿವಪೂಜೆ ಮಾಡಿ ನಂತರ ಪತ್ರಿಕೆಗಳನ್ನು ಓದುವ ಮೂಲಕ ಪ್ರಸಕ್ತ ವಿದ್ಯಮಾನಗಳನ್ನು ತಿಳಿದುಕೊಂಡರು. ನಿನ್ನೆ ವೈದ್ಯರು ಶ್ರೀಗಳಿಗೆ ಚಿಕಿತ್ಸೆ ನೀಡಿ ಸ್ಟಂಟ್ ಅಳವಡಿಸಿದ್ದು, ಚೇತರಿಸಿಕೊಂಡಿರುವ ಶ್ರೀಗಳು ಎಂದಿನಂತೆ ದೈನಂದಿನ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ.

ಭಕ್ತರ ದಂಡು:

ಶ್ರೀಗಳ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದಿದೆ ಎನ್ನುವ ಸುದ್ದಿ ತಿಳಿಯುತ್ತಿದ್ದಂತೆ ರಾಜ್ಯದ ವಿವಿಧ ಭಾಗಗಳಿಂದ ಭಕ್ತರ ದಂಡೇ ಶ್ರೀಮಠಕ್ಕೆ ಹರಿದುಬಂತು. ಅಲ್ಲದೆ, ಗಣ್ಯರು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೂ ಭೇಟಿ ನೀಡಿ ಶ್ರೀಗಳ ಆರೋಗ್ಯ ವಿಚಾರಿಸಿದರು.  ಮಠಕ್ಕೆ ಶ್ರೀಗಳು ತೆರಳುತ್ತಿದ್ದಂತೆ ಭಕ್ತರು ಅವರ ದರ್ಶನ ಪಡೆಯಲು ಮುಗಿಬಿದ್ದರು. ಶ್ರೀಗಳ ಆರೋಗ್ಯದ ಮೇಲೆ ನಿಗಾ ವಹಿಸಿರುವ ವೈದ್ಯರ ತಂಡ ಮುಂದಿನ ಮೂರು ದಿನಗಳ ಕಾಲ ಮಠದಲ್ಲೇ ಚಿಕಿತ್ಸೆ ಮುಂದುವರಿಸಲಿದ್ದಾರೆ. ಶ್ರೀಗಳ ಪೂಜಾ ಕೈಂಕರ್ಯಗಳಿಗೆ ಯಾವುದೇ ತೊಂದರೆಯಾಗದಂತೆ ಮಠದ ಸಿಬ್ಬಂದಿ ಮತ್ತು ಕಿರಿಯ ಶ್ರೀಗಳು ವ್ಯವಸ್ಥೆ ಕಲ್ಪಿಸಿದ್ದಾರೆ.

Facebook Comments

Sri Raghav

Admin