ನನಗೆ ಬಹುಮತ ಖಚಿತ : ಪನ್ನೀರ್ ಸೆಲ್ವಂ

ಈ ಸುದ್ದಿಯನ್ನು ಶೇರ್ ಮಾಡಿ

Panner-Selvam

ಚೆನ್ನೈ, ಫೆ.14- ತಮಿಳುನಾಡು ಮುಖ್ಯಮಂತ್ರಿಯಾಗಲು ನನಗೆ ಬಹುಮತ ಲಭಿಸುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಉಸ್ತುವಾರಿ ಸಿಎಂ ಪನ್ನೀರ್ ಸೆಲ್ವಂ ಎಐಎಡಿಎಂಕೆ ಮುಖಂಡರು ಮತ್ತು ಕಾರ್ಯಕರ್ತರು ಒಟ್ಟಿಗೆ ಶ್ರಮಿಸಿ ರಾಜ್ಯದ ಹಿತ ಕಾಪಾಡುವ ಅಗತ್ಯವಿದೆ ಎಂದು ಹೇಳಿದ್ದಾರೆ. ತಮ್ಮ ನಿವಾಸದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿದ ಅವರು, ತಾವು ಮುಖ್ಯಮಂತ್ರಿಯಾಗಿ ಅತ್ಯುತ್ತಮ ಆಡಳಿತ ನೀಡಲು ಬದ್ಧ. ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ರಕ್ಷಣೆಗೆ ಅಗತ್ಯವಾದ ಎಲ್ಲ ಕ್ರಮಗಳನ್ನೂ ಕೈಗೊಳ್ಳುತ್ತೇನೆ ಎಂದರು. ಪಕ್ಷದಲ್ಲಿ ಈಗ ಉದ್ಭವಿಸಿರುವ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಿ ಜಯಲಲಿತಾ ಅವರ ಆತ್ಮಕ್ಕೆ ಶಾಂತಿ ಲಭಿಸುವಂತಹ ಕೆಲಸ ಮಾಡಬೇಕೆಂದು ಅವರು ತಮ್ಮ ಬಣದ ಮುಖಂಡರು ಮತ್ತು ಕಾರ್ಯಕರ್ತರಲ್ಲಿ ಮನವಿ ಮಾಡಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin