ನನ್ನ ಸೋಲಿಗೆ ಕಾಂಗ್ರೆಸ್ ನ ಮುಖಂಡರೇ ಕಾರಣ : ಶಿವರಾಮೇಗೌಡ ಆರೋಪ

ಈ ಸುದ್ದಿಯನ್ನು ಶೇರ್ ಮಾಡಿ

Shivaramegouda

ಮಂಡ್ಯ, ಆ.27- ಕಳೆದ ವಿಧಾನ ಪರಿಷತ್ ಚುನಾವಣೆಯಲ್ಲಿ ನನ್ನ ಸೋಲಿಗೆ ಕಾಂಗ್ರೆಸ್ನ ಕೆಲ ಮುಖಂಡರೇ ಕಾರಣ ಎಂದು ಮಾಜಿ ಶಾಸಕ ಎಲ್.ಆರ್.ಶಿವರಾಮೇಗೌಡ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವನ್ನು ಬಲಗೊಳಿಸುವ ದೃಷ್ಟಿಯಿಂದ ಚುನಾವಣೆಯಲ್ಲಿ ಸ್ಪರ್ಧಿಸಿದ್ದೆ. ಕಾಂಗ್ರೆಸ್ನ ಕೆಳಹಂತದ ಕಾರ್ಯಕರ್ತರು ಉತ್ಸಾಹಭರಿತರಾಗಿ ಚುನಾವಣೆಯಲ್ಲಿ ಕಾರ್ಯನಿರ್ವಹಿಸಿದರು. ಆದರೂ ಜಿಲ್ಲೆಯ ಕೆಲ ಕಾಂಗ್ರೆಸ್ ಮುಖಂಡರಿಂದ ಚುನಾವಣೆಯಲ್ಲಿ ಸೋಲು ಅನುಭವಿಸಬೇಕಾಯಿತು ಎಂದು ಬೇಸರ ವ್ಯಕ್ತಪಡಿಸಿದರು. ಮುಂಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ನಾಗಮಂಗಲ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ಹೇಳಿದ ಅವರು, ಪಾಕಿಸ್ತಾನದ ಕುರಿತಂತೆ ರಮ್ಯಾ ಹೇಳಿಕೆಯಲ್ಲಿ ಅವರದು ತಪ್ಪಿಲ್ಲ. ಅವರು ತಮ್ಮ ಅಭಿವ್ಯಕ್ತಿ ಸ್ವಾತಂತ್ರ್ಯದಿಂದ ಮಾತನಾಡಿದ್ದಾರೆ. ಅದು ಪಕ್ಷದ ಅಭಿಪ್ರಾಯವಲ್ಲ. ಅದು ವೈಯಕ್ತಿಕ ಅಭಿಪ್ರಾಯ ಎಂದು ತಿಳಿಸಿದರು.

► Follow us on –  Facebook / Twitter  / Google+

Facebook Comments

Sri Raghav

Admin