ನಮ್ಮದು ಭ್ರಷ್ಟಾಚಾರ ರಹಿತ ಸರ್ಕಾರ : ಅಮಿತ್ ಷಾ

ಈ ಸುದ್ದಿಯನ್ನು ಶೇರ್ ಮಾಡಿ

amith-sha

ಕೋಝಿಕೊಡ್, ಸೆ.25-ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಬಡವರ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಸರ್ಕಾರವು ಯಾವುದೇ ಭ್ರಷ್ಟಾಚಾರ ಇಲ್ಲದೆ ಪಾರದರ್ಶಕವಾಗಿ ಆಡಳಿತ ನಡೆಸುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ಷಾ ಹೇಳಿದರು.  ಕೇರಳದ ಕೋಝಿಕೊಡ್ ನಡೆಯುತ್ತಿರುವ ಕೊನೆ ದಿನದ ರಾಷ್ಟ್ರೀ ಯ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಮಾತನಾಡಿದ ಅವರು, ಮೋದಿ ಸರ್ಕಾರವು ನಾನಾ ಯೋಜನೆಗಳನ್ನು ಅನುಷ್ಠಾನಗೊಳಿಸಿ ಬಡವರ ಅಭಿವೃದ್ಧಿಗೆ ಕೆಲಸ ಮಾಡುತ್ತಿದೆ. ಯಾವುದೇ ರೀತಿಯ ಭ್ರಷ್ಟಾಚಾರ ಎಸಗದೆ ದಕ್ಷ ಆಡಳಿತ ನಡೆಸುತ್ತಿದೆ ಎಂದರು.

ಹಿಂದಿನ ಯುಪಿಎ ಸರ್ಕಾರವು ಭಾರೀ ಭ್ರಷ್ಟಾಚಾರ ಎಸಗಿದ್ದು, ನಾನಾ ಪ್ರಕರಣಗಳಲ್ಲಿ ಸಿಲುಕಿತ್ತು. ಆದರೆ ಬಿಜೆಪಿ ಸರ್ಕಾರವು ಯಾವುದೇ ಭ್ರಷ್ಟಾಚಾರದ ಭ್ರಷ್ಟಾಚಾರವಿಲ್ಲದ ಅಕಾರ ನಡೆಸುತ್ತಿದೆ. ದೇಶಕ್ಕಾಗಿಯೇ ಸರ್ಕಾರವು ಕೆಲಸ ಮಾಡುತ್ತಿದೆ ಎಂದು ಅಮಿತ್ ಷಾ ಹೇಳಿದರು.

► Follow us on –  Facebook / Twitter  / Google+

Facebook Comments

Sri Raghav

Admin