ನಾಗರಹೊಳೆ ಉದ್ಯಾನವನದಲ್ಲಿ ಕೊಳೆತ ಸ್ಥಿತಿಯಲ್ಲಿ ಹೆಣ್ಣಾನೆ ಶವಪತ್ತೆ

ಈ ಸುದ್ದಿಯನ್ನು ಶೇರ್ ಮಾಡಿ

Elepahantr

ಹುಣಸೂರು, ಆ.24- ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣಾನೆ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ನಾಗರಹೊಳೆ ಉದ್ಯಾನವನದ ವೀರನಹೊಸಹಳ್ಳಿವಲಯದ ಸಿ.ಪಿ.ಟಿ. 3ರ ಬಳಿಯಲ್ಲಿ ವಾರದ ಹಿಂದೆ ಮೃತಪಟ್ಟಿರಬಹುದಾದ ಸುಮಾರು 40 ವರ್ಷದ ಹೆಣ್ಣಾನೆ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ, ಸ್ಥಳಕ್ಕೆ ಹುಲಿಯೋಜನೆ ಕ್ಷೇತ್ರ ನಿರ್ದೇಶಕ ಮಣಿಕಂಠನ್, ಎಸಿಎಫ್ ಶ್ರೀಪತಿ, ಆರ್.ಎಫ್.ಓ. ಮಧುಸೂಧನ್ ಭೇಟಿ ನೀಡಿ ಪರಿಶೀಲಿಸಿದರು. ನಾಗರಹೊಳೆ ಪಶು ವೈದ್ಯಕೀಯ ಇಲಾಖೆ ಸಹಾಯಕ ನಿರ್ದೇಶಕ ಡಾ.ಉಮಾಶಂಕರ್ ಮರಣೋತ್ತರ ಪರೀಕ್ಷೆ ನಡೆಸಿದರು. ಶವವನ್ನು ಸ್ಥಳದಲ್ಲೇ ಸುಟ್ಟು ಹಾಕಲಾಯಿತು.

► Follow us on –  Facebook / Twitter  / Google+

Facebook Comments

Sri Raghav

Admin