ನಾಗಾಲ್ಯಾಂಡ್ ಮುಖ್ಯಮಂತ್ರಿ ರಿಯೋ ಪ್ರಮಾಣವಚನ

ಈ ಸುದ್ದಿಯನ್ನು ಶೇರ್ ಮಾಡಿ

Nagaland-CM

ಕೊಹಿಮಾ, ಮಾ.8-ನಾಗಾಲ್ಯಾಂಡ್ ಮುಖ್ಯಮಂತ್ರಿಯಾಗಿ ಎನ್‍ಡಿಪಿಪಿ ನಾಯಕ ನೀಫ್ಯು ರಿಯೋ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜಧಾನಿ ಕೊಹಿಮಾದಲ್ಲಿ ನಡೆದ ಸಾರ್ವಜನಿಕ ಸಮಾರಂಭದಲ್ಲಿ ರಾಜ್ಯಪಾಲ ಪಿ.ಬಿ.ಆಚಾರ್ಯ ರಿಯೋ ಅವರಿಗೆ ಪ್ರಮಾಣವಚನ ಬೋಧಿಸಿದರು. ಅವರು ಈಶಾನ್ಯ ರಾಜ್ಯಕ್ಕೆ ನಾಲ್ಕನೆ ಬಾರಿ ಮುಖ್ಯಮಂತ್ರಿಯಾಗಿದ್ದಾರೆ.

ಬಿಜೆಪಿಯ ವೈ.ಪಟ್ಟೋನ್ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇವರೊಂದಿಗೆ 10 ಸಚಿವರಿಗೂ ಸಹ ರಾಜ್ಯಪಾಲರು ಪ್ರಮಾಣವಚನ ಬೋಧಿಸಿದರು. ಕೇಂದ್ರ ಸಚಿವರಾದ ನಿರ್ಮಲಾಸೀತರಾಮನ್, ಕಿರಣ್ ರಿಜಿಜು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೇರಿದಂತೆ ಅನೇಕ ಗಣ್ಯರು ಹಾಜರಿದ್ದರು. ನಾಗಾಲ್ಯಾಂಡ್‍ನಲ್ಲಿ ನ್ಯಾಷನಲಿಸ್ಟ್ ಡೆಮೊಕ್ರಾಟಿಕ್ ಪ್ರೋಗ್ರೆಸಿವ್ ಪಾರ್ಟಿ ಮತ್ತು ಬಿಜೆಪಿ ಮೈತ್ರಿ ಕೂಟ ಸರ್ಕಾರ ಅಸ್ಥಿತ್ವಕ್ಕೆ ಬಂದಿದೆ.

Facebook Comments

Sri Raghav

Admin