ನಾಡಾ ಚಂಡಮಾರುತ ಎಫೆಕ್ಟ್ : ರಾಜ್ಯದಲ್ಲಿ 3 ದಿನಗಳ ಕಾಲ ಮಳೆ ಸಾಧ್ಯತೆ

ಈ ಸುದ್ದಿಯನ್ನು ಶೇರ್ ಮಾಡಿ

Nada-01

ಬೆಂಗಳೂರು, ಡಿ.1- ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ನಾಡಾ ಚಂಡಮಾರುತ ಪ್ರಭಾವ ರಾಜ್ಯದ ಮೇಲೆ ಪರಿಣಾಮ ಬೀರಲಿದ್ದು, ಮೂರು ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಕೇಂದ್ರ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸ್ ರೆಡ್ಡಿ ಈ ಸಂಜೆಗೆ ತಿಳಿಸಿದ್ದಾರೆ. ರಾಜ್ಯಾದ್ಯಂತ ಮೋಡ ಕವಿದ ವಾತಾವರಣವಿದ್ದು, ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರ ಅಥವಾ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದರು. ನಾಡಾ ಚಂಡಮಾರುತದ ಪರಿಣಾಮ ತಮಿಳುನಾಡು ಹಾಗೂ ಪುದುಚೇರಿ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಚಂಡಮಾರುತ ಬಲಗೊಂಡು ಆಂಧ್ರ, ಕರಾವಳಿಯತ್ತ ಮುನ್ನುಗ್ಗಿದರೆ ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಮಳೆಯಾಗುವ ಸಂಭವವಿದೆ ಎಂದು ತಿಳಿಸಿದರು.

ಹಳೆ ಮೈಸೂರು ಭಾಗದ ಕೋಲಾರ, ಚಾಮರಾಜನಗರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಮೈಸೂರು, ಮಂಡ್ಯ ಸೇರಿದಂತೆ ನಾನಾ ಭಾಗಗಳಲ್ಲಿ ಸಾಧಾರಣ ಮಳೆ ಬೀಳಲಿದೆ ಎಂದು ಹೇಳಿದರು.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin