ನಾಡಾ ಚಂಡಮಾರುತ ದುರ್ಬಲ, ವಾಯುಭಾರ ಕುಸಿತದಿಂದ ಭಾರಿ ಮಳೆ
ಈ ಸುದ್ದಿಯನ್ನು ಶೇರ್ ಮಾಡಿ
‘ಚೆನ್ನೈ, ಡಿ.2-ನಾಡಾ ಚಂಡಮಾರುತ ದುರ್ಬಲವಾಗಿದ್ದು, ನಿರೀಕ್ಷೆಯಂತ ವಾಯುಭಾರ ಕುಸಿತವಾಗಿ ಮಾರ್ಪಟ್ಟಿದೆ. ಇದರಿಂದಾಗಿ ತಮಿಳುನಾಡಿನ ನಾಗಪಟ್ಟಿಣಂ ಮತ್ತು ವೇದರನಯಂ ಸೇರಿದಂತೆ ಕರಾವಳಿ ತೀರ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಕರ್ನಾಟಕದ ಮೇಲೂ ಪರಿಣಾಮ ಬೀರಿದೆ. ಇಂದು ನಾಳೆ ರಾಜ್ಯದ ಹಲವಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ವಾಯುಭಾರ ಕುಸಿತದಿಂದಾಗಿ ತಮಿಳುನಾಡಿನ ದಕ್ಷಿಣ ಭಾಗದಲ್ಲಿರುವ ನಾಗಪಟ್ಟಣಂ, ತಂಜಾವೂರು, ಮಧುರಂತಕಂ, ಮೇಲ್ಮರವೂತ್ತೂರು, ತಿರುವಾಯೂರು, ತಿರುನೆಲ್ಲೂರು, ಕುಂಭಕೋಣಂ, ಕಡಲೂರು ಮೊದಲಾದ ಜಿಲ್ಲೆಗಳಲ್ಲಿ ಗಾಳಿಯೊಂದಿಗೆ ಭಾರೀ ಮಳೆ ಸುರಿಯುತ್ತಿದೆ. ಪುದುಚೇರಿಯಲ್ಲೂ ಸಹ ವರುಣನ ಆರ್ಭಟ ಮುಂದುವರೆದಿದೆ.
ಬೆಳಗ್ಗೆಯಿಂದಲೇ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ತಮಿಳುನಾಡಿನ ವಿವಿಧೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಚಂಡಮಾರುತದ ಭೀತಿಯಿಂದಾಗಿ ಕರಾವಳಿ ಭಾಗದ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
Facebook Comments