ನಾನು ಡಿನೋಟಿಫಿಕೇಷನ್ ಮಾಡಿಲ್ಲ, ಬಿಜೆಪಿಯವರ ಆರೋಪಕ್ಕೆ ಉತ್ತರಿಸಲ್ಲ : ಸಿಎಂ

ಈ ಸುದ್ದಿಯನ್ನು ಶೇರ್ ಮಾಡಿ

Siddaramaiah--01

ಬೆಂಗಳೂರು,ಅ.10- ನಾನು ಯಾವುದೇ ಡಿನೋಟಿಫಿಕೇಷನ್ ಮಾಡಿಯೇ ಇಲ್ಲ ಹೀಗಿರುವಾಗ ಇನ್ನು ಬಿಜೆಪಿಯವರ ಆರೋಪಕ್ಕೆ ಉತ್ತರ ನೀಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ತಮ್ಮ ವಿರುದ್ಧದ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ನಾನು ಡಿನೋಟಿಫಿಕೇಷನ್ ಮಾಡಿರುವುದಕ್ಕೆ ಬಿಜೆಪಿಯವರ ಬಳಿ ದಾಖಲೆಗಳಿದೆಯೇ ಎಂದು ಪ್ರಶ್ನಿಸಿದರು.

ಬಿಜೆಪಿ ನಾಯಕರ ಬಳಿ ನಾನು ಡಿನೋಟಿಫಿಕೇಷನ್ ಮಾಡಿರುವ ದಾಖಲೆ ಪ್ರತಿ ಇದ್ದರೇ ಬಿಡುಗಡೆ ಮಾಡಲಿ. ಚುನಾವಣೆ ಸಮೀಪಿಸುತ್ತಿರುವುದರಿಂದ ನನ್ನ ಹೆಸರು ಕೆಡಿಸಲು ಬಿಜೆಪಿ ಸುಳ್ಳು ಆರೋಪಗಳನ್ನು ಮಾಡುತ್ತಿದೆ. ಅವರ ಈ ತಂತ್ರ ಯಶಸ್ವಿಯಾಗಲ್ಲ. ಈ ತಂತ್ರ ಅವರಿಗೇ ತಿರುಗುಬಾಣವಾಗಲಿದೆ ಎಂದರು.

ನನ್ನ ಮೇಲಿನ ಆರೋಪಕ್ಕೆ ಸಂಬಂಧಿಸಿದ ದಾಖಲೆಗಳಿದ್ದರೆ ಅವರು ಯಾವುದೇ ರೀತಿಯ ಕ್ರಮ ಕೈಗೊಳ್ಳಲು ಅವಕಾಶವಿದೆ. ಅವರು ಎಲ್ಲಿಯಾದರೂ ಇದನ್ನು ಪ್ರಶ್ನಿಸಲಿ ನಮ್ಮ ಅಭ್ಯಂತರವಿಲ್ಲ ಎಂದು ಹೇಳಿದರು. ರಾಜ್ಯ ಬಿಜೆಪಿ ನಾಯಕರು ಹೈಕಮಾಂಡ್‍ಗೆ ಕಪ್ಪ ನೀಡಿರುವ ವಿಷಯಕ್ಕೆ ಸಂಬಂಧಿಸಿದಂತೆ ಅನಂತಕುಮಾರ್ ಮತ್ತು ಯಡಿಯೂರಪ್ಪ ನಡೆಸಿರುವ ಸಂಭಾಷಣೆ ಧ್ವನಿ ಅಸಲಿಯೆಂಬುದು ಸಾಬೀತಾಗಿದೆ. ನಾವು ಹೈಕಮಾಂಡ್‍ಗೆ ಕಪ್ಪ ಕೊಟ್ಟಿದ್ದೇವೆ ಎಂಬ ಆರೋಪ ಸತ್ಯವಲ್ಲ ಎಂದರು. ಅನಂತ್, ಯಡಿಯೂರಪ್ಪ ಸಂಭಾಷಣೆ ಪೂರ್ತಿ ವಿವರ ಬಿಜೆಪಿಯವರೇ ಬಿಡುಗಡೆ ಮಾಡಲಿ. ನಾವೇಕೆ ಬಿಡುಗಡೆ ಮಾಡಬೇಕು ಎಂದು ಪ್ರಶ್ನಿಸಿದರು.

ನನ್ನ ಮಗ ಡಾ.ಯತೀಂದ್ರ ವಿರುದ್ಧ ಬಿಜೆಪಿ ಸುಳ್ಳು ಆರೋಪ ಮಾಡುತ್ತಿದ್ದು, ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವ ಬಗ್ಗೆ ಕಾನೂನು ತಜ್ಞರ ಜತೆ ಜರ್ಚಿಸಲಾಗುತ್ತಿದೆ ಎಂದು ತಿಳಿಸಿದರು.

Facebook Comments

Sri Raghav

Admin