ನಾನು ಯಾರು ಗೊತ್ತೆ ಎಂದು ಅಧಿಕಾರಿಗಳಿಗೆ ಬೆದರಿಕೆ ಹಾಕಿದ ಸಂಸದ ಸಿದ್ದೇಶ್ವರ್

ಈ ಸುದ್ದಿಯನ್ನು ಶೇರ್ ಮಾಡಿ

Siddeshwar--01

ದಾವಣಗೆರೆ, ಮೇ 12- ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ್ ಅಧಿಕಾರಿಗಳಿಗೆ ಬೆದರಿಸಿದ ಘಟನೆಯೂ ನಡೆದಿದೆ. ಸಿದ್ದೇಶ್ವರ್ ಅವರ ಗುರುತಿನ ಚೀಟಿ ಕೇಳಿದ್ದಕ್ಕೆ ನಾನು ಯಾರೆಂಬುದು ನಿನಗೆ ಗೊತ್ತಿಲ್ಲವೇ ಎಂದು ಬೆದರಿಸಿದ್ದಾರೆ.   ಮೈಸೂರಿನ ಕೆ.ಆರ್.ನಗರ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಹೊಸಹಳ್ಳಿ ವೆಂಕಟೇಶ್ ಆ್ಯಂಬುಲೆನ್ಸ್‍ನಲ್ಲಿ ಬಂದು ಮತದಾನ ಮಾಡಿದ್ದು ವಿಶೇಷವಾಗಿತ್ತು. ಹುಣಸೂರು ತಾಲ್ಲೂಕಿನ ಹರೀನಹಳ್ಳಿಯಲ್ಲಿ ನಿನ್ನೆ ಭಾರೀ ಮಳೆಗೆ ಬಾಲಕಿ ಮೃತಪಟ್ಟ ಹಿನ್ನೆಲೆಯಲ್ಲಿ ಪರಿಹಾರಕ್ಕೆ ಒತ್ತಾಯಿಸಿ ಮತದಾನ ಬಹಿಷ್ಕರಿಸಿದ್ದಾರೆ. (ರಾಜ್ಯ  ವಿಧಾನಸಭಾ ಚುನಾವಣೆ : ಮತದಾನದ Live Updates )

ಮತಕೇಂದ್ರದ ಬಳಿ 50,000 ನಗದು ವಶ

ರಾಮನಗರ, ಮೇ 12- ಮತದಾರರಿಗೆ ಮತಕೇಂದ್ರದ ಬಳಿ ಹಣ ಹಂಚುತ್ತಿದ್ದಾಗ ದಾಳಿ ನಡೆಸಿದ ಪ್ಲೈಯಿಂಗ್ ಸ್ಕ್ವಾಡ್ 50 ಸಾವಿರ ರೂ. ನಗದನ್ನು ವಶಪಡಿಸಿಕೊಂಡಿದ್ದಾರೆ. ಹನುಮಂತನಗರದ 74/ಎ ಸಂಖ್ಯೆಯ ಮತಗಟ್ಟೆ ಬಳಿ ಕಾಂಗ್ರೆಸ್ ಕಾರ್ಯಕರ್ತ ಶಂಭುಗೌಡ ಎಂಬುವರು ಹಣ ಹಂಚಿಕೆ ಮಾಡುತ್ತಿದ್ದಾರೆ ಎಂಬ ಆರೋಪದ ಮೇಲೆ ಸ್ಕ್ವಾಡ್ ದಾಳಿ ನಡೆಸಿದ್ದಾರೆ.

ಬಿರುಸಿನ ಮತದಾನ:
ಇಂದು ಬೆಳಗ್ಗೆ 7 ಗಂಟೆಯಿಂದಲೇ ರಾಮನಗರದ ವಿವಿಧ ಮತಟ್ಟೆಗಳಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತು ಮತಚಲಾವಣೆ ಮಾಡುತ್ತಿದ್ದ ದೃಶ್ಯ ಎಲ್ಲೆಡೆ ಕಂಡು ಬಂದಿತ್ತು. ನಿನ್ನೆ ಸಂಜೆ ಹಾಗೂ ರಾತ್ರಿ ಮಳೆ ಬಿದ್ದ ಹಿನ್ನೆಲೆಯಲ್ಲಿ ಬಹುತೇಕ ಮತದಾರರು ಬೆಳಗ್ಗೆಯೇ ಮತದಾನ ಮಾಡಲು ಮತಗಟ್ಟೆಗಳಿಗೆ ಆಗಮಿಸಿದ್ದರು. ಮಹಿಳೆಯರು, ವಯೋವೃದ್ಧರು ಕೂಡ ಉತ್ಸಾಹದಿಂದ ಮತ ಚಲಾಯಿಸಿದರು.  ಯುವ ಮತದಾರರು ಮೊದಲ ಬಾರಿ ತಮ್ಮ ಹಕ್ಕನ್ನು ಚಲಾಯಿಸಲು ಭಾರೀ ಉತ್ಸಾಹ ತೋರುತ್ತಿದ್ದದ್ದು ಕಂಡು ಬಂದಿತು. ಕೆಲವೊಂದು ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿದರೆ ರಾಮನಗರ ಜಿಲ್ಲೆಯಲ್ಲಿ ಬಹುತೇಕ ಶಾಂತಿಯುತ ಮತದಾನವಾದ ವರದಿಯಾಗಿತ್ತು.

ಅಧಿಕಾರಿಗಳಿಗೆ ಬೆದರಿಕೆ:
ಇನ್ನು ಕೆಲವು ಕಡೆ ರಾಜಕೀಯ ಪಕ್ಷಗಳ ಪ್ರಮುಖರು ಅಧಿಕಾರಿಗಳಿಗೆ ಬೆದರಿಕೆ ಹಾಕಿ ಮತದಾನಕ್ಕೆ ಅಡ್ಡಿಪಡಿಸಿದ ಪ್ರಸಂಗವೂ ಜರುಗಿದೆ. ಬೆಂಗಳೂರಿನ ಹೆಬ್ಬಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತಗಟ್ಟೆಯೊಂದರಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬ ಅಧಿಕಾರಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ವಶಕ್ಕೆ ತೆಗೆದುಕೊಳ್ಳಲಾಗಿದೆ.

ಶಾಸಕರು ಬರುವವರೆಗೆ ಯಾರಿಗೂ ಮತ ಚಲಾಯಿಸಲು ಅವಕಾಶ ನೀಡಬಾರದು ಎಂದು ಕಾರ್ಯಕರ್ತನೊಬ್ಬ ಅಡ್ಡಿಪಡಿಸಿದ ಕೊನೆಗೆ ಪೊಲೀಸರು ಆತನನ್ನು ವಶಕ್ಕೆ ಪಡೆದರು.   ಇದೇ ರೀತಿ ಗದಗ ಜಿಲ್ಲೆ ನರಗುಂದದಲ್ಲೂ ಬಿಜೆಪಿ ಅಭ್ಯರ್ಥಿ ಸಿಸಿ ಪಾಟೀಲ್ ಅಧಿಕಾರಿಗೆ ಬೆದರಿಕೆ ಹಾಕಿರುವ ಘಟನೆಯೂ ನಡೆದಿದೆ.

 

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin