ನಾಲೆಗೆ ನೀರು ಹರಿಸಲು ಒತ್ತಾಯಿಸಿ ಕಚೇರಿಗೆ ಮುತ್ತಿಗೆ

ಈ ಸುದ್ದಿಯನ್ನು ಶೇರ್ ಮಾಡಿ

water

ನಂಜನಗೂಡು, ಅ.18- ನುಗು ಮೇಲ್ದಂಡೆ ನಾಲೆಯಲ್ಲಿ(ಹಲಸೂರು ನಾಲೆ) ನೀರು ಹರಿಸುವಂತೆ ಒತ್ತಾಯಿಸಿ ನೂರಕ್ಕೂ ಹೆಚ್ಚು ಸಂಖ್ಯೆಯ ರೈತರು ತಾಲೂಕಿನ ಹುಲ್ಲಹಳ್ಳಿಯಲ್ಲಿರುವ ಕಬಿನಿ ನೀರಾವರಿ ನಿಗಮದ ಕಚೇರಿಗೆ ಮುತ್ತಿಗೆ ಹಾಕಿ ಕಚೇರಿಯಲ್ಲಿದ್ದ ಎಇಇಗೆ ದಿಗ್ಭಂಧನ ವಿಧಿಸಿ ಆಕ್ರೋಶ ವ್ಯಕ್ತಪಡಿಸಿದರು.ಹುಲ್ಲಹಳ್ಳಿ,ಕಣೇನೂಡು, ಮಾದನಹಳ್ಳಿಯಿಂದ ಆಗಮಿಸಿದ್ದ ನೂರಕ್ಕೂ ಹೆಚ್ಚುರೈತರು ನಿನ್ನೆ 11ರ ಸಮಯದಲ್ಲಿ ಕಚೇರಿ ಮುಂಭಾಗ ಸಂಘಟಿತರಾಗಿ ನೀರಾವರಿ ಇಲಾಖೆ ಅಧಿಕಾರಿಗಳ ಕಾರ್ಯ ವೈಖರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಕೆಲ ರೈತರು, ನುಗು ಅಣೆಕಟ್ಟೆಯಲ್ಲಿ ನೀರು ಸಮರ್ಪಕವಾಗಿ ಇದ್ದರೂ ಅಧಿಕಾರಿಗಳ ಬೇಜವಾಬ್ದಾರಿಯಿಂದ ನೀರು ಸಮರ್ಪಕವಾಗಿ ಹರಿಯುತ್ತಿಲ್ಲ. ಸಮಸ್ಯೆ ಬಗೆಹರಿಸಬೇಕಾದ ಅಧಿಕಾರಿಗಳು ರೈತರ ವಿರುದ್ಧವೇ ದೂರುತ್ತಿದ್ದಾರೆ. ರೈತರ ಭತ್ತದ ಬೆಳೆಗಳು ಒಣಗುತ್ತಿವೆ ತಕ್ಷಣ ನಾಲೆಯಲ್ಲಿ ನೀರು ಹರಿಸಲು ಕ್ರಮ ಕೈಗೊಳ್ಳದ ಹೊರತಾಗಿ ದಿಗ್ಭಂದನ ತೆರವುಗೊಳಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಉದ್ರಿಕ್ತ ರೈತರನ್ನು ಸಂತೈಸಿ ಮಾತನಾಡಿದ ನೀರಾವರಿ ಇಲಾಖೆ ಎಇಇ ಶ್ರೀನಿವಾಸ್, ನಾಲಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ ಮೂರ್ನಾಲ್ಕು ದಿನಗಳ ಹಿಂದೆ ಮಳೆಯಾಗಿದ್ದರಿಂದ ನಾಲೆಯಲ್ಲಿ ನೀರು ಹರಿಸುವಿಕೆ ಸ್ಥಗಿತಗೊಳಿಸಲಾಗಿತ್ತು. ನೀರು ಹರಿಸಲು ತಕ್ಷಣವೇ ಕ್ರಮ ಕೈಗೊಳ್ಳುವ ಜೊತೆಗೆ ಅಚ್ಚುಕಟ್ಟು ಪ್ರದೇಶದ ಕೊನೆ ಭಾಗಕ್ಕೆ ಇಂದು ಸಂಜೆಯೊಳಗೆ ನೀರು ತಲುಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ನಂತರ ರೈತರು ದಿಗ್ಭಂದನ ತೆರವುಗೊಳಿಸಿ ತೆರಳಿದರು.ರೈತ ಸಂಘದ ತಾಲೂಕು ಉಪಾಧ್ಯಕ್ಷ ಶಿರಮಳ್ಳಿ ಸಿದ್ಧಪ್ಪ, ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಶಿವರಾಮೇಗೌಡ, ಪಿಎಸಿಸಿ ಬ್ಯಾಂಕ್ ನಿರ್ದೇಶಕ ಮಹೇಶ್, ಕೆಂಡಗಣ್ಣಪ್ಪ ಸೇರಿದಂತೆ ನೂರಕ್ಕೂ ಹೆಚ್ಚು ಸಂಖ್ಯೆಯ ರೈತರು ಉಪಸ್ಥಿತರಿದ್ದರು.

 

► Follow us on –  Facebook / Twitter  / Google+

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin