ನಾಲ್ಕರಿಂದ ಏಳನೇ ತರಗತಿಯ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ

ಈ ಸುದ್ದಿಯನ್ನು ಶೇರ್ ಮಾಡಿ

Public-Exam--01

ಬೆಂಗಳೂರು, ಜು.13- ನಾಲ್ಕರಿಂದ ಏಳನೇ ತರಗತಿಯ ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯ ಮತ್ತು ಶಿಕ್ಷಣ ಗುಣಮಟ್ಟ ಪರೀಕ್ಷೆಗಾಗಿ ಪಬ್ಲಿಕ್ ಪರೀಕ್ಷೆಯನ್ನು ನಡೆಸಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್‍ಸೇಠ್ ಹೇಳಿದರು. ಎಸ್ಸೆಸ್ಸೆಲ್ಸಿ ಪರೀಕ್ಷಾ ಮಂಡಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ರಾಮನಗರದಲ್ಲಿ ಶಿಕ್ಷಕರ  ಶೈಕ್ಷಣಿಕ ಸಾಮಥ್ರ್ಯ ಕುರಿತು ಪರೀಕ್ಷೆ ನಡೆಸಲಾಯಿತು. ಅದರಲ್ಲಿ ಬಹುತೇಕರು ಅನುತ್ತೀರ್ಣರಾದರು. ಶಿಕ್ಷಣದ ಗುಣಮಟ್ಟ ಸುಧಾರಿಸುವ ಮೂಲ ಉದ್ದೇಶದಿಂದ 4ರಿಂದ 7ನೇ ತರಗತಿವರೆಗೂ ಪಬ್ಲಿಕ್ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಈಗಾಗಲೇ ಐದು ಮತ್ತು ಏಳನೆ ತರಗತಿ ಪಬ್ಲಿಕ್ ಪರೀಕ್ಷೆ ನಡೆಸಲಾಗುತ್ತಿತ್ತು. ಈ ವರ್ಷದಿಂದ 4ನೆ ತರಗತಿಯನ್ನು ಸೇರಿಸಿಕೊಂಡು ಒಟ್ಟು 4ರಿಂದ 7ನೇ ತರಗತಿವರೆಗೂ ಪಬ್ಲಿಕ್ ಪರೀಕ್ಷೆ ನಡೆಸಲಾಗುವುದು ಎಂದರು.

Tanveer-ait

ವಿದ್ಯಾರ್ಥಿಗಳು ಅನುತೀರ್ಣರಾದರೆ ಅವರಿಗೆ ಸೂಕ್ತ ತರಬೇತಿ ನೀಡಿ ಪೂರಕ ಪರೀಕ್ಷೆಯನ್ನೂ ನಡೆಸಲಾಗುವುದು. ಪಬ್ಲಿಕ್ ಪರೀಕ್ಷೆಯ ಮೌಲ್ಯಮಾಪನ ಆಯಾ ಶಿಕ್ಷಣಾಧಿಕಾರಿ ಕ್ಷೇತ್ರಗಳ ಶಾಲೆಗಳಲ್ಲೇ ನಡೆಯಲಿದ್ದು, ಒಂದು ಉತ್ತರ ಪತ್ರಿಕೆಯನ್ನು ಮತ್ತೊಂದು ಶಾಲೆಗೆ ಕಳುಹಿಸಿ ಮೌಲ್ಯಮಾಪನ ನಡೆಸಲಾಗುವುದು ಎಂದು ತಿಳಿಸಿದರು.

10ಸಾವಿರ ಶಿಕ್ಷಕರ ನೇಮಕ:

ಉತ್ತರ ಕರ್ನಾಟಕ ಭಾಗದ ಶಾಲೆಗಳಲ್ಲಿ ಗಣಿತ ಮತ್ತು ವಿಜ್ಞಾನ ವಿಷಯದ ಶಿಕ್ಷಕರ ಕೊರತೆ ತೀವ್ರವಾಗಿದೆ. ಹೈದರಾಬಾದ್ ಕರ್ನಾಟಕದಲ್ಲಿ 5400 ಶಿಕ್ಷಕರ ಕೊರತೆ ಇದೆ. ರಾಜ್ಯ ಸರ್ಕಾರ 10 ಸಾವಿರ ಶಿಕ್ಷಕರ ನೇಮಕಕ್ಕೆ ಅನುಮತಿ ನೀಡಿದ್ದು, ಅದರಲ್ಲಿ 6826 ಶಿಕ್ಷಕರನ್ನು ಹೈದರಾಬಾದ್ ಕರ್ನಾಟಕ ಭಾಗಕ್ಕೆ ನಿಯೋಜಿಸಲಾಗುವುದು. ಉಳಿದ 4600 ಶಿಕ್ಷಕರನ್ನು ಬೇರೆ ಬೇರೆ ಜಿಲ್ಲೆಗಳಿಗೆ ನೇಮಿಸಲಾಗುತ್ತದೆ. ಮುಂಬೈ ಕರ್ನಾಟಕ ಮತ್ತು ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಕೆಲಸ ಮಾಡುವ ಶಿಕ್ಷಕರಿಗೆ ವಿಶೇಷ ಭತ್ಯೆ ನೀಡುವ ಕುರಿತು 6ನೇ ವೇತನ ಆಯೋಗದ ವರದಿಯ ನಂತರ ಪರಿಶೀಲನೆ ನಡೆಸಲಾಗುವುದು ಎಂದರು.

ಈ ಭಾಗದ ಶಿಕ್ಷಕರು ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಕೆಲಸ ಮಾಡು ಹಿದೇಟು ಹಾಕುತ್ತಿದ್ದಾರೆ. ಹೀಗಾಗಿ ಒಮ್ಮೆ ನೇಮಕಗೊಂಡ ಶಿಕ್ಷಕರನ್ನು ಐದು ವರ್ಷಗಳವರೆಗೂ ಹೈದರಾಬಾದ್ ಕರ್ನಾಟಕ ಭಾಗದಿಂದ ಬೇರೆ ಜಿಲ್ಲೆಗಳಿಗೆ ವರ್ಗಾವಣೆ ಮಾಡದಿರಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು. ಈ ಬಾರಿ ವರ್ಗಾವಣೆ ನಿಯಮಾವಳಿಗಳಿಗೆ ತಿದ್ದುಪಡಿ ತಂದು ಹೊಸ ಕಾಯ್ದೆ ಅನ್ವಯ 22 ದಿನಗಳೊಳಗೆ ಕೌನ್ಸಿಲಿಂಗ್ ಮುಗಿಸಲು ಚಿಂತನೆ ನಡೆಸಲಾಗಿದೆ ಎಂದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin