ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ, ವಿದ್ಯಾರ್ಥಿಗಳಿಗೆ ಆಲ್‍ ದಿ ಬೆಸ್ಟ್

ಈ ಸುದ್ದಿಯನ್ನು ಶೇರ್ ಮಾಡಿ

PUC-Exam--01

ಬೆಂಗಳೂರು, ಫೆ.28- ನಾಳೆಯಿಂದ ರಾಜ್ಯಾದ್ಯಂತ ಆರಂಭಗೊಳ್ಳಲಿರುವ ದ್ವಿತೀಯ ಪಿಯುಸಿ ಪರೀಕ್ಷೆ ಸುಸೂತ್ರವಾಗಿ ನಡೆಯಲು ಎಲ್ಲಾ ಸಿದ್ಧತೆಗಳು ಮಾಡಿಕೊಳ್ಳಲಾಗಿದ್ದು , ತೀವ್ರ ಕಟ್ಟೆಚ್ಚರ ವಹಿಸಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕಿ ಶಿಖಾ ಅವರು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಪ್ರಶ್ನೆಪತ್ರಿಕೆಗಳು ಬಯಲಾಗದಂತೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ವಿಶೇಷ ಪೊಲೀಸ್ ಭದ್ರತೆಯನ್ನು ಕೂಡ ಪಡೆಯಲಾಗಿದೆ ಎಂದು ಹೇಳಿದರು.

ಒಟ್ಟು ಈ ಬಾರಿ 5,39,340 ವಿದ್ಯಾರ್ಥಿಗಳು ಮೊದಲ ಬಾರಿಗೆ ಪರೀಕ್ಷೆ ಎದುರಿಸುತ್ತಿದ್ದಾರೆ. ಇದಲ್ಲದೆ 1,22,346 ವಿದ್ಯಾರ್ಥಿಗಳು ಮತ್ತೆ ಪರೀಕ್ಷೆ (ಪುನರಾವರ್ತನೆ) ಬರೆಯುತ್ತಿದ್ದಾರೆ. ಇದಲ್ಲದೆ 28,374 ಖಾಸಗಿಯಾಗಿ ಕೂಡ ಪರೀಕ್ಷೆ ತೆಗೆದುಕೊಳ್ಳುತ್ತಿದ್ದಾರೆ ಎಂದು ತಿಳಿಸಿದ್ದಾರೆ. ರಾಜ್ಯಾದ್ಯಂತ 1004 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು , ಎಲ್ಲೆಡೆ ಈಗಾಗಲೇ ಸಿಸಿ ಟಿವಿಗಳನ್ನು ಅಳವಡಿಸಲಾಗಿದೆ. ಒಟ್ಟು 38 ವಿಷಯಗಳಲ್ಲಿ ಪರೀಕ್ಷೆ ಬರೆಯಲಿದ್ದು , ಮೊದಲ ಬಾರಿಗೆ ಎನ್‍ಎಸ್‍ಕ್ಯೂಎಫ್‍ನ ವಿಷಯವೂ ಸೇರಿದೆ ಎಂದು ವಿವರಿಸಿದ್ದಾರೆ.

ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರ ತಲುಪಲು ಕೆಎಸ್‍ಆರ್‍ಟಿಸಿ ಬಸ್‍ನಲ್ಲಿ ಉಚಿತ ಪ್ರಯಾಣದ ವ್ಯವಸ್ಥೆ ಮತ್ತು ಪರೀಕ್ಷೆ ಕೇಂದ್ರದಲ್ಲಿ ಆರೋಗ್ಯ ಪರಿವೀಕ್ಷಕರನ್ನು ಕೂಡ ನೇಮಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಜೆರಾಕ್ಸ್ ಅಂಗಡಿಗಳು, ಸಾಮಾಜಿಕ ಜಾಲತಾಣಗಳ ಮೇಲೂ ಕಣ್ಣಿಡಲಾಗಿದೆ. ವಿದ್ಯಾರ್ಥಿಗಳು ಯಾವುದೇ ಒತ್ತಡಕ್ಕೆ ಒಳಗಾಗದೆ ದೃಢ ಸಂಕಲ್ಪದಿಂದ ಮತ್ತು ಏಕಾಗ್ರತೆಯಿಂದ ಪರೀಕ್ಷೆ ಬರೆಯಿರಿ ಎಂದು ಆಲ್‍ದಿ ಬೆಸ್ಟ್ ಎಂದು ಶುಭ ಹಾರೈಸಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin