ನಾಳೆ ಎಚ್‍ಡಿಕೆ ಆಸ್ಪತ್ರೆಯಿಂದ ಡಿಸ್ಚಾರ್ಜ್

ಈ ಸುದ್ದಿಯನ್ನು ಶೇರ್ ಮಾಡಿ

Kumaraswamy

ಬೆಂಗಳೂರು, ಸೆ.26-ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಂಪೂರ್ಣ ಚೇತರಿಸಿಕೊಂಡಿದ್ದು, ನಾಳೆ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಬಹುದು ಎಂದು ಹೃದ್ರೋಗ ತಜ್ಞ ಡಾ.ಸತ್ಯಕಿ ನಂಬಾಲ ತಿಳಿಸಿದರು. ಕೇವಲ ಅಬ್ಸರ್ವೇಷನ್‍ಗಾಗಿ ಐಸಿಯುನಲ್ಲಿಡಲಾಗಿದ್ದು,ದ್ರವರೂಪದ ಆಹಾರ ನೀಡಲಾಗುತ್ತಿದೆ. ಸೋಂಕು ತಗುಲಬಾರದೆಂಬ ಕಾರಣಕ್ಕಾಗಿ ಆಸ್ಪತ್ರೆಯಲ್ಲೇ ಇರಿಸಿಕೊಳ್ಳಲಾಗಿದೆ ಎಂದು ಹೇಳಿದರು. ಕಳೆದ ನಾಲ್ಕು ದಿನಗಳ ಹಿಂದೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಎಚ್.ಡಿ.ಕುಮಾರಸ್ವಾಮಿಯವರು ಹೃದಯ ಶಸ್ತ್ರಚಿಕಿತ್ಸೆಗೆ ಒಳಪಟ್ಟಿದ್ದರು.

Facebook Comments

Sri Raghav

Admin