ನಾಳೆ ಪರಿಸ್ಥಿರಿ ವಿಕೋಪಕ್ಕೆ ಹೋದರೆ ಮಾತ್ರ ಕೆಎಸ್‍ಆರ್‍ಟಿಸಿ, ಬಿಎಂಟಿಸಿ ಸೇವೆ ಸ್ಥಗಿತ

ಈ ಸುದ್ದಿಯನ್ನು ಶೇರ್ ಮಾಡಿ

KSRTC-and-BMTC

ಬೆಂಗಳೂರು, ನ.27- ದೇಶಾದ್ಯಂತ ಆಕ್ರೋಶ್ ದಿವಸ್ ಆಚರಣೆ ಹಿನ್ನೆಲೆಯಲ್ಲಿ ನಾಳೆ ಎಂದಿನಂತೆ ಕೆಎಸ್‍ಆರ್‍ಟಿಸಿ ಮತ್ತು ಬಿಎಂಟಿಸಿ ಬಸ್‍ಗಳ ಸೇವೆ ಪ್ರಯಾಣಿಕರಿಗೆ ದೊರೆಯಲಿದೆ. ದೇಶಾದ್ಯಂತ 500 ಹಾಗೂ 1000ರೂ. ಮುಖಬೆಲೆಯ ನೋಟುಗಳ ಚಲಾವಣೆಯನ್ನು ನಿಷೇಧಿಸಿರುವುದನ್ನು ವಿರೋಧಿಸಿ ವಿರೋಧ ಪಕ್ಷಗಳು ನಾಳೆ ಆಕ್ರೋಶ್ ದಿವಸ್ ಆಚರಣೆಗೆ ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ದೈನಂದಿನ ಜನಜೀವನ ಅಸ್ತವ್ಯಸ್ತವಾಗುವ ಆತಂಕ ಜನರಲ್ಲಿ ಮನೆ ಮಾಡಿದೆ. ಯಾವುದೇ ಬಂದ್ ಅಥವಾ ಪ್ರತಿಭಟನೆ ಉಂಟಾದರೂ ನೇರವಾಗಿ ಪರಿಣಾಮ ಉಂಟಾಗುವುದು ಸಾರಿಗೆ ಸೇವೆ ಮೇಲೆ. ನಾಳೆ ಆಚರಿಸಲಿರುವ ಆಕ್ರೋಶ್ ದಿವಸ್ ಸಂದರ್ಭದಲ್ಲೂ ಬಸ್‍ಗಳ ಸಂಚಾರದಲ್ಲಿ ಯಾವುದೇ ವ್ಯತ್ಯಾಸವಿರುವುದಿಲ್ಲ ಎಂದು ಕೆಎಸ್‍ಆರ್‍ಟಿಸಿ ಹಾಗೂ ಬಿಎಂಟಿಸಿಯ ಅಧಿಕೃತ ಮೂಲಗಳು ತಿಳಿಸಿವೆ.


ನೋಟ್ ಬ್ಯಾನ್ ಖಂಡಿಸಿ ಕರೆಕೊಟ್ಟಿರುವ ಭಾರತ್ ಬಂದ್ ಗೆ ನಿಮ್ಮ ಬೆಂಬಲವಿದೆಯೇ ..?

View Results

Loading ... Loading ...

ದೈನಂದಿನ ಮಾರ್ಗಗಳ ಬಸ್ ಸಂಚಾರದಲ್ಲಿ ಯಾವುದೇ ವ್ಯತ್ಯಾಸ ಉಂಟಾಗುವುದಿಲ್ಲ. ಎಂದಿನಂತೆ ಯಥಾರೀತಿ ಕೆಎಸ್‍ಆರ್‍ಟಿಸಿ ಮತ್ತು ಬಿಎಂಟಿಸಿ ಬಸ್ ಸಂಚಾರವಿರಲಿದೆ. ಪ್ರಯಾಣಿಕರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿವೆ.   ಒಂದು ವೇಳೆ ಪ್ರತಿಭಟನೆ ವಿಕೋಪಕ್ಕೆ ಹೋಗಿ ಬಸ್‍ಗಳಿಗೆ ಹಾನಿ ಉಂಟಾಗುವ ಘಟನೆಗಳು ನಡೆದರೆ ಆಗ ಮಾತ್ರ ಸಂಚಾರ ಸ್ಥಗಿತಗೊಳಿಸಬೇಕಾಗುತ್ತದೆ. ನಾಳೆ ಬಸ್ ಸಂಚಾರ ಎಂದಿನಂತೆ ಇರುವುದರಿಂದ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಕೆಎಸ್‍ಆರ್‍ಟಿಸಿ ಮತ್ತು ಬಿಎಂಟಿಸಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin