ನಾಳೆ ಬೆಂಗಳೂರಿಗೆ ರಾಷ್ಟ್ರಪತಿ ಅಭ್ಯರ್ಥಿ ಮೀರಾ ಕುಮಾರ್

ಈ ಸುದ್ದಿಯನ್ನು ಶೇರ್ ಮಾಡಿ

Meera-Kumar

ಬೆಂಗಳೂರು, ಜೂ.29- ಯುಪಿಎ ಮೈತ್ರಿಕೂಟದ ರಾಷ್ಟ್ರಪತಿ ಅಭ್ಯರ್ಥಿ ಮೀರಾ ಕುಮಾರ್ ನಾಳೆ ಬೆಂಗಳೂರಿಗೆ ಆಗಮಿಸುತ್ತಿದ್ದು, ಕಾಂಗ್ರೆಸ್ ಸಂಸದರು, ಶಾಸಕರ ಮತ ಯಾಚಿಸಲಿದ್ದಾರೆ. ನಾಳೆ ರಾತ್ರಿ ನಗರಕ್ಕೆ ಆಗಮಿಸುವ ಅವರು, ಶನಿವಾರ ಬೆಳಗ್ಗೆ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಪಕ್ಷದ ಶಾಸಕರು, ಸಂಸದರ ಮತ ಹಾಕುವಂತೆ ಕೋರಲಿದ್ದಾರೆ.

ಜೆಡಿಎಸ್ ವರಿಷ್ಠರಾದ ಎಚ್.ಡಿ.ದೇವೇಗೌಡ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿಯವರನ್ನು ಭೇಟಿ ಮಾಡಲಿದ್ದು, ತಮ್ಮ ಉಮೇದುವಾರಿಕೆಗೆ ಈಗಾಗಲೇ ಸೂಚಕರಾಗಿ ಸಹಿ ಹಾಕಿರುವ ಹಿನ್ನೆಲೆಯಲ್ಲಿ ಇವರ ಮತವನ್ನು ಕೇಳಲಿದ್ದಾರೆ. ಇದರೊಂದಿಗೆ ಜೆಡಿಎಸ್ ಶಾಸಕರು, ಸಂಸದರ ಬೆಂಬಲ ಕೋರುವ ಸಾಧ್ಯತೆ ಇದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin