ನಾಳೆ ಬೆಳಗ್ಗೆ 10 ಗಂಟೆಗೆ ಟೌನ್‍ಹಾಲ್‍ನಿಂದ ಫ್ರೀಡಂಪಾರ್ಕ್‍ವರೆಗೆ ಭಾರೀ ಮೆರವಣಿಗೆ

ಈ ಸುದ್ದಿಯನ್ನು ಶೇರ್ ಮಾಡಿ

Town-Halla

ಬೆಂಗಳೂರು, ಸೆ.8- ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆಗೊಳಿಸುವಂತೆ ಸರ್ವೋಚ್ಚನ್ಯಾಯಾಲಯವು ನೀಡಿರುವ ತೀರ್ಪನ್ನು ವಿರೋಧಿಸಿ ಕನ್ನಡ ಒಕ್ಕೂಟ ಕರ್ನಾಟಕ ಬಂದ್‍ಗೆ ಕರೆಕೊಟ್ಟಿರುವ ಹಿನ್ನೆಲೆಯಲ್ಲಿ ಟೌನ್‍ಹಾಲ್‍ನಿಂದ ಫ್ರೀಡಂಪಾರ್ಕ್‍ವರೆಗೆ ನಾಳೆ ಬೆಳಗ್ಗೆ 10 ಗಂಟೆಗೆ ಸಹಸ್ರಾರು ಸಂಖ್ಯೆಯಲ್ಲಿ ಭಾರೀ ಮೆರವಣಿಗೆ ಹೊರಡಲಿದೆ.  ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಡಾ.ರಾಜ್‍ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು, ಕರವೇಯ ಶಿವರಾಮೇಗೌಡ ಬಣ, ಪ್ರವೀಣ್‍ಕುಮಾರ್ ಶೆಟ್ಟಿ ಬಣ, ಗಿರೀಶ್‍ಗೌಡ, ಜಯಕರ್ನಾಟಕ ಸಂಘಟನೆಯ ದೀಪಕ್ ಸೇರಿದಂತೆ ಸುಮಾರು 2400ಕ್ಕೂ ಹೆಚ್ಚು ಸಂಘಟನೆಗಳು ಈಗಾಗಲೇ ರಾಜ್ಯಾದ್ಯಂತ ಬಂದ್‍ಗೆ ಬೆಂಬಲ ಕೊಟ್ಟಿವೆ.

ಕೆಎಸ್‍ಆರ್‍ಟಿಸಿ ಹಾಗೂ ಬಿಎಂಟಿಸಿ ನೌಕರರ ಸಂಘ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಬಿಡಬ್ಲ್ಯೂಎಸ್‍ಎಸ್‍ಬಿ, ಬಿಡಿಎ, ರಾಜ್ಯ ಸರ್ಕಾರಿ ನೌಕರರು, ಲಾರಿ ಮಾಲೀಕರು, ಆಟೋ ಚಾಲಕರು, ಎಲ್ಲಾ ಖಾಸಗಿ ವಾಹನಗಳ ಮಾಲೀಕರು, ಪೀಣ್ಯ ವಾಣಿಜ್ಯೋದ್ಯಮಿಗಳ ಸಂಘ, ಬಸವನಗುಡಿ ಒಕ್ಕಲಿಗರ ಸಂಘ, ಚಿಕ್ಕಪೇಟೆಯ ಮಾರ್ವಾಡಿ ಅಸೋಸಿಯೇಷನ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಬಂದ್‍ಗೆ ವ್ಯಾಪಕ ಬೆಂಬಲ ಸೂಚಿಸಿದ್ದಾರೆ. ಹೋಟೆಲ್ ಕಾರ್ಮಿಕರು, ಚಿನ್ನ-ಬೆಳ್ಳಿ ವ್ಯಾಪಾರಿಗಳು, ಕುಕ್ಕುಟೋದ್ಯಮ, ದಂಡುಪ್ರದೇಶದ ಕನ್ನಡ ಸಂಘದ ಅಧ್ಯಕ್ಷ ಜಗನ್ನಾಥರೆಡ್ಡಿ, ಕಸಾಪ ನಗರ ಘಟಕದ ಅಧ್ಯಕ್ಷ ಮಾಯಣ್ಣ, ಸಂಗೊಳ್ಳಿ ರಾಯಣ್ಣ ಪ್ರತಿಷ್ಠಾನದ ಕೃಷ್ಣಮೂರ್ತಿ ಸೇರಿದಂತೆ ಹಲವಾರು ಕನ್ನಡಪರ ಸಂಘಟನೆಗಳು ನಾಳಿನ ಬಂದ್‍ಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿವೆ.

► Follow us on –  Facebook / Twitter  / Google+

Facebook Comments

Sri Raghav

Admin