ನಾಳೆ ಮಧ್ಯಾಹ್ನದವರೆಗೆ ಕಾದು ನೋಡಿ : ಸುರೇಶ್‍ಕುಮಾರ್

ಈ ಸುದ್ದಿಯನ್ನು ಶೇರ್ ಮಾಡಿ

Suresh-Kumar--01

ಬೆಂಗಳೂರು, ಮೇ 24- ವಿಧಾನಸಭಾಧ್ಯಕ್ಷ ಚುನಾವಣೆಯಲ್ಲಿ ಗೆದ್ದೇ ಗೆಲ್ಲುವ ವಿಶ್ವಾಸವಿದೆ ಎಂದು ಬಿಜೆಪಿಯ ಸುರೇಶ್‍ಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ತಮ್ಮ ಪಕ್ಷದ ಶಾಸಕರಾದ ಸುನೀಲ್‍ಕುಮಾರ್, ಅಶ್ವತ್ಥನಾರಾಯಣರ ಜತೆಗೂಡಿ ಆಗಮಿಸಿದ ಅವರು, ವಿಧಾನಸಭೆಯ ಕಾರ್ಯದರ್ಶಿ ಮೂರ್ತಿ ಅವರಿಗೆ ನಾಮಪತ್ರ ಸಲ್ಲಿಸಿದರು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಪಕ್ಷದ ಹಿರಿಯ ನಾಯಕರ ಸೂಚನೆ ಮೇರೆಗೆ ವಿಧಾನಸಭಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದೇನೆ. ನಾನು ಗೆದ್ದೇ ಗೆಲ್ಲುತ್ತೇನೆ ಎಂಬ ವಿಶ್ವಾಸವಿದೆ. ನಾಳೆ ಮಧ್ಯಾಹ್ನದವರೆಗೂ ಕಾದು ನೋಡಿ ಎಂದು ಅವರು ಹೇಳಿದರು.

Facebook Comments

Sri Raghav

Admin