ನಾಳೆ ಸರ್ವಪಲ್ಲಿ ರಾಧಾಕೃಷ್ಣ ಜನ್ಮ ದಿನಾಚರಣೆ

ಈ ಸುದ್ದಿಯನ್ನು ಶೇರ್ ಮಾಡಿ

dr-sarvapalli--radhakrishna

ಚಿಕ್ಕನಾಯಕನಹಳ್ಳಿ, ಸೆ.14- ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಸಂಯುಕ್ತಾಶ್ರಯದಲ್ಲಿ ನಾಳೆ(ಸೆ.15) ಪಟ್ಟಣದ ಕನ್ನಡ ಸಂಘದ ವೇದಿಕೆಯಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ 129ನೇ ಜನ್ಮದಿನಾಚರಣೆ ಹಾಗೂ ಶಿಕ್ಷಕರ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ.ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ಸಿ.ಬಿ.ಸುರೇಶ್‍ಬಾಬು ಅಧ್ಯಕ್ಷತೆ ವಹಿಸುವರು. ಗೃಹ ಸಚಿವ ಡಾ.ಜಿ.ಪರಮೇಶ್ವರ್ ಧ್ವಜಾರೋಹಣ ನೆರವೇರಿಸುವರು. ಸಂಸದ ಎಸ್.ಪಿ.ಮುದ್ದಹನುಮೇಗೌಡ ಡಾ.ರಾಧಾಕೃಷ್ಣನ್‍ರವರ ಭಾವಚಿತ್ರ ಅನಾವರಣಗೊಳಿಸುವರು.
ಜಿ.ಪಂ.ಅಧ್ಯಕ್ಷೆ ಲತಾರವಿಕುಮಾರ್, ಜಿಪಂ ಉಪಾಧ್ಯಕ್ಷೆ ಶಾರದನರಸಿಂಹಮೂರ್ತಿ, ತುಮಕೂರು ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷ ಶಿವಕುಮಾರ್, ಇಸ್ರೋ ಹಿರಿಯ ವಿಜ್ಞಾನಿ ಹೆಚ್.ಎನ್.ಸುರೇಶ್‍ಕುಮಾರ್, ತಾಪಂಅಧ್ಯಕ್ಷೆ ಹೊನ್ನಮ್ಮಶೇಷಯ್ಯ, ಪುರಸಭಾಧ್ಯಕ್ಷ ಸಿ.ಟಿ.ದಯಾನಂದ್, ಜಿಪಂ ಸದಸ್ಯರಾದ ಕಲ್ಲೇಶ್, ರಾಮಚಂದ್ರಯ್ಯ, ಸಿದ್ದರಾಮಯ್ಯ, ಮಹಲಿಂಗಪ್ಪ, ಮಂಜುಳ ಮತ್ತಿತರರು ಭಾಗವಹಿಸುವರು.

 

► Follow us on –  Facebook / Twitter  / Google+

Facebook Comments

Sri Raghav

Admin