‘ನಾವು ಎಂಟು ಜನ ಒಟ್ಟಾಗಿದ್ದೇವೆ, ಚುನಾವಣೆಯಲ್ಲಿ ಖಚಿತವಾಗಿ ಸ್ಪರ್ಧಿಸುತ್ತೇವೆ’

ಈ ಸುದ್ದಿಯನ್ನು ಶೇರ್ ಮಾಡಿ

Chaluvarayasamy--01

ಬೆಂಗಳೂರು, ಜೂ.1– ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾವು ಸ್ಪರ್ಧಿಸುವುದು ಖಚಿತ. ಆದರೆ ಯಾವ ಪಕ್ಷದಿಂದ ಸ್ಪರ್ಧಿಸುತ್ತೇವೆ ಎಂದು ಹೇಳುವುದು ಅಪ್ರಸ್ತುತ ಎಂದು ಮಾಜಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.  ಚಲುವರಾಯಸ್ವಾಮಿಯವರು ತಮ್ಮ ಹುಟ್ಟುಹಬ್ಬದ ಅಂಗವಾಗಿ ನಗರದ ಗಾಳಿ ಆಂಜನೇಯ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.  ಜೆಡಿಎಸ್‍ನಿಂದ ಅಮಾನತುಗೊಂಡ ಶಾಸಕರು ಕಾಂಗ್ರೆಸ್ ಕಡೆಗೆ ಹೋಗುತ್ತೇವೆ ಎಂದು ಸ್ಪಷ್ಟವಾಗಿ ಹೇಳುತ್ತಿಲ್ಲ. ಈಗಲೇ ಹೇಳುವುದು ಅಪ್ರಸ್ತುತವೂ ಆಗುತ್ತದೆ. ಕಾಂಗ್ರೆಸ್‍ಗೆ ಹೋಗುವ ಬಗ್ಗೆ ನಾವಿನ್ನೂ ತೀರ್ಮಾನ ಮಾಡಿಲ್ಲ ಎಂದರು.



ಶಾಸಕ ಸ್ಥಾನಕ್ಕೆ ಸ್ಪರ್ಧಿಸುವುದಂತೂ ಖಚಿತ. ಯಾವ ಪಕ್ಷ ಎಂಬುವುದು ಅಪ್ರಸ್ತುತ. ನಾವೆಲ್ಲರೂ ಒಟ್ಟಾಗಿದ್ದೇವೆ. ಚುನಾವಣೆ ವರ್ಷವಾದ್ದರಿಂದ ದೇವರಿಗೆ ಬೇಡಿಕೊಂಡಿದ್ದೇನೆ ಎಂದು ಹೇಳಿದರು. ಜೆಡಿಎಸ್ ಆರಂಭಿಸಿರುವ ಮನೆ ಮನೆಗೆ ಕುಮಾರಣ್ಣ ಕುರಿತಂತೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ನಾವೇನೇ ಮಾತನಾಡಿದರೂ ತಪ್ಪಾಗುತ್ತದೆ ಎಂದರು.

ಕೆಪಿಸಿಸಿ ಅಧ್ಯಕ್ಷರಾಗಿ ಸತತ ಮೂರು ಬಾರಿಗೆ ಡಾ.ಜಿ.ಪರಮೇಶ್ವರ್ ಆಯ್ಕೆಯಾಗಿದ್ದಾರೆ. ಅವರೂ ಸೇರಿದಂತೆ ಪ್ರಮುಖ ಹುದ್ದೆಗಳನ್ನು ಅಲಂಕರಿಸಿರುವ ಡಿ.ಕೆ.ಶಿವಕುಮಾರ್, ಕೆ.ಎಚ್.ಮುನಿಯಪ್ಪ ಅವರಿಗೆ ನಾವು 7 ಮಂದಿ ಅಭಿನಂದನೆ ಸಲ್ಲಿಸುತ್ತೇವೆ ಎಂದು ಹೇಳಿದರು. ಅಭಿಮಾನಿಗಳು ಹಾಗೂ ಆತ್ಮೀಯರು ಸೇರಿದಂತೆ ಹಲವರು ಚಲುವರಾಯಸ್ವಾಮಿಯವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin