ನಿಂತಿದ್ದ ಬೊಲೆರೋ ಗೆ ಲಾರಿ ಡಿಕ್ಕಿ : ಮೂವರು ಸ್ಥಳದಲ್ಲೇ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Bolero-01

ಹಾವೇರಿ,ಡಿ.19-ನಿಂತಿದ್ದ ಬುಲೆರೋ ವಾಹನಕ್ಕೆ ಲಾರಿಯೊಂದು ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಸಾವನ್ನಪ್ಪಿ ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಲ್ಲಿನ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಭವಿಸಿದೆ. ಮೃತರೆಲ್ಲರೂ ರಾಯಚೂರು ಜಿಲ್ಲೆ ಮಾನ್ವಿ ತಾಲ್ಲೂಕಿನವರು. ಮೃತರನ್ನು ನರಸಪ್ಪ ಲಮಾಣಿ(35), ಗೋವಿಂದಪ್ಪ ಲಮಾಣಿ(29) ಹಾಗೂ ಕೋಮೇಶ್ ಲಮಾಣಿ(19) ಎಂದು ಗುರುತಿಸಲಾಗಿದೆ. ಗಾಯಾಳು ಒಬ್ಬನನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು , ಅವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಇವರು ಮಾನ್ವಿ ತಾಲ್ಲೂಕಿನ ರೈತರಾಗಿದ್ದು , ಬ್ಯಾಡಗಿ ಮಾರುಕಟ್ಟೆಗೆ ಮಾರಾಟಕ್ಕಾಗಿ ಮೆಣಸಿನಕಾಯಿ ತೆಗೆದುಕೊಂಡು ಹೋಗುತ್ತಿದ್ದರು. ಮಾರ್ಗದಲ್ಲಿ ಇವರು ಪ್ರಯಾಣಿಸುತ್ತಿದ್ದ ಬುಲೆರೋ ಪಂಕ್ಚರ್ ಆದ್ದರಿಂದ ಟೈರ್ ಬದಲಿಸಲು ರಸ್ತೆಯ  ಪಕ್ಕದಲ್ಲಿ ವಾಹನ ನಿಲ್ಲಿಸಲಾಗಿತ್ತು.  ಟೈರ್ ಬದಲಿಸುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಹಾವೇರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin