ನಿಂತಿದ್ದ ಲಾರಿಗೆ ವೇಗವಾಗಿ ಬಂದ ಕಾರು ಡಿಕ್ಕಿ, ಸ್ಥಳದಲ್ಲೇ ಐವರ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Accident--01

ಕಾರವಾರ, ಆ.10- ನಿಂತಿದ್ದ ಲಾರಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಅಂಕೋಲಾ ತಾಲೂಕಿನ ಪೊನ್ನಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ರಾತ್ರಿ ಸಂಭವಿಸಿದೆ.ಮೃತರನ್ನು ವಿಜಯಪುರ ಜಿಲ್ಲೆಯ ಜಮನಾಳದ ದಾನಪ್ಪ ರುದ್ರಪ್ಪ ಪೂರಿ, ಅವರ ಪುತ್ರ ಆದಿತ್ಯ ದಾನಪ್ಪ ಪೂರಿ, ರಾಜು ಗೋಪಾಲ ಪಾಟೀಲ ಹಾಗೂ ಮತ್ತಿಬ್ಬರು ಮಕ್ಕಳ ಹೆಸರು ತಿಳಿದುಬಂದಿಲ್ಲ.

ಪುಣ್ಯಕ್ಷೇತ್ರಗಳ ದರ್ಶನಕ್ಕಾಗಿ ಉತ್ತರ ಕರ್ನಾಟಕ ಜಿಲ್ಲೆಗೆ ಆಗಮಿಸಿ ನಂತರ ಸುಬ್ರಹ್ಮಣ್ಯಕ್ಕೆ ತೆರಳುವಾಗ ಕಳೆದ ರಾತ್ರಿ 11 ಗಂಟೆ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಗೊಂಡಿರುವ ಇನ್ನೂ ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಅಂಕೋಲಾ ಪಟ್ಟಣದ ಆಸ್ಪತ್ರೆಗೆ ಸೇರಿಸಲಾಗಿದೆ. ಸ್ಥಳಕ್ಕೆ ಪಿಎಸ್‍ಐ ಬಸಪ್ಪ ಭೇಟಿ ನೀಡಿ ಪರಿಶೀಲನೆ ಕೈಗೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Facebook Comments

Sri Raghav

Admin