ನಿಖಿಲ್ ರಾಜಕೀಯ ಎಂಟ್ರಿಗೆ ಗೌಡರ ಗ್ರೀನ್ ಸಿಗ್ನಲ್

ಈ ಸುದ್ದಿಯನ್ನು ಶೇರ್ ಮಾಡಿ

Nikhi--02

ಶಿರಸಿ, ಅ.15-ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಪುತ್ರ ಹಾಗೂ ನಟ ನಿಖಿಲ್ ಕುಮಾರಸ್ವಾಮಿ ರಾಜಕೀಯಕ್ಕೆ ಬಂದರೆ ತಪ್ಪೇನಿಲ್ಲ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ. ಬಂಜಾರ ಸಮುದಾಯದ ಸಮಾವೇಶದಲ್ಲಿ ಭಾಗವಹಿಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಖಿಲ್ ಕುಮಾರಸ್ವಾಮಿ ಚಿತ್ರರಂಗ ಬಿಟ್ಟು ಬರುವುದಿಲ್ಲ. ಆದರೆ ತಮ್ಮ ತಂದೆಯ ಬಗೆಗಿನ ಕಾಳಜಿಯಿಂದ 2018ರ ವಿಧಾನಸಭೆ ಚುನಾವಣೆಯಲ್ಲಿ ಚುನಾವಣೆಗೆ ಬರಬಹುದಷ್ಟೇ ಎಂದರು.

ಶಾಸಕ ಸಿ.ಪಿ.ಯೋಗೇಶ್ವರ್ ಪ್ರಬುದ್ಧರಾಗಿದ್ದು, ಯಾವ ಪಕ್ಷ ಸೇರಬೇಕೆಂಬ ಬಗ್ಗೆ ಅವರೇ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಜೆಡಿಎಸ್ ಬರುತ್ತಾರಾ ಎಂಬ ಪ್ರಶ್ನೆಗೆ ಉತ್ತರಿಸಿದರು. ಶಾಸಕ ಜಮೀರ್ ಅಹಮ್ಮದ್ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಗೌಡರು, ಜಮೀರ್ ದೊಡ್ಡವರಾಗಿದ್ದು, ಅವರ ಬಗ್ಗೆ ಮಾತನಾಡಬಾರದು ಎಂದರು. ಅನೇಕ ಮನಸ್ಸಿನಲ್ಲಿ ಪ್ರಾದೇಶಿಕ ಪಕ್ಷ ಉಳಿಯುವುದು ಕಷ್ಟ ಎಂಬ ಅಭಿಪ್ರಾಯವಿದೆ. ಆದರೆ ಪಕ್ಕದ ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು ಮತ್ತಿತರ ರಾಜ್ಯಗಳನ್ನು ಗಮನಿಸಿದಾಗ ಪ್ರಾದೇಶಿಕ ಪಕ್ಷದ ಸಾಮಥ್ರ್ಯ ಗೊತ್ತಾಗುತ್ತದೆ ಎಂದು ಅವರು ಮಾರ್ಮಿಕವಾಗಿ ನುಡಿದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin