ನಿಗಮ ಮಂಡಳಿಯಲ್ಲಿ ಹಿಂದಿನ ಅಧ್ಯಕ್ಷರನ್ನೇ ಮುಂದುವರೆಸಲು ಒತ್ತಾಯ

ಈ ಸುದ್ದಿಯನ್ನು ಶೇರ್ ಮಾಡಿ

Nigama

ಬೆಂಗಳೂರು, ಆ.25- ನಿಗಮ ಮಂಡಳಿಗಳಿಗೆ ಮುಂದಿನ ಅವಧಿಗೆ ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ನೇಮಿಸುವವರೆಗೂ ಹಾಲಿ ಅಧ್ಯಕ್ಷ, ಉಪಾಧ್ಯಕ್ಷರನ್ನೇ ಮುಂದುವರೆಸ ಬೇಕೆಂಬ ಒತ್ತಾಯ ಕೇಳಿ ಬಂದಿದೆ. ಕಳೆದ ಎರಡು ವರ್ಷಗಳ ಹಿಂದೆ ಸುಮಾರು 100ಕ್ಕೂ ಹೆಚ್ಚು ನಿಗಮ ಮಂಡಳಿಗಳಿಗೆ ಅಧ್ಯಕ್ಷ, ಉಪಾಧ್ಯಕ್ಷರನ್ನು ಒಂದೂವರೆ ವರ್ಷಗಳ ಅವಧಿಗೆ ಸೀಮಿತಗೊಳಿಸಿ ನೇಮಿಸಲಾಗಿತ್ತು.  ಅಧಿಕಾರವಾಧಿ ಪೂರ್ಣಗೊಂಡ ಅವಧಿಯಲ್ಲಿ ರಾಜ್ಯದಲ್ಲಿ ಬರ ಪರಿಸ್ಥಿತಿ ಇದುದ್ದರಿಂದ ಹೊಸ ದಾಗಿ ಯಾವ ರಾಜಕೀಯ ನೇಮಕಾತಿ ಗಳನ್ನು ಮಾಡಬಾರದು ಎಂದು ಹೈಕಮಾಂಡ್ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಹಾಲಿ ಇದ್ದ ಅಧ್ಯಕ್ಷ-ಉಪಾಧ್ಯಕ್ಷರ ಅಧಿಕಾರಾವಧಿಯನ್ನು ಮೂರು ತಿಂಗಳ ಅವಧಿಗೆ ವಿಸ್ತರಣೆ ಮಾಡಿ ಸರ್ಕಾರ ಪರಿಷ್ಕೃತ ಆದೇಶ ಹೊರಡಿಸಿತ್ತು.
ಈ ಅವಧಿ ನಿನ್ನೆಗೆ ಮುಕ್ತಾಯ ಗೊಂಡಿದೆ.

ಸದ್ಯಕ್ಕೆ ಈ ನಿಗಮ ಮಂಡಳಿಗಳಿಗೆ ಹೊಸದಾಗಿ ಯಾರನ್ನೂ ನೇಮಿಸಲಾಗಿಲ್ಲ. ನಿಗಮ ಗಳನ್ನು ಖಾಲಿ ಬಿಡುವ ಬದಲಾಗಿ ಹಾಲಿ ಅಧ್ಯಕ್ಷ-ಉಪಾಧ್ಯಕ್ಷರನ್ನೇ ಮುಂದುವರೆಸಿ ಹೊಸದಾಗಿ ಮುಖ್ಯಸ್ಥರನ್ನು ನೇಮಕ ಮಾಡಿ ದಾಗ ನಾವು ಹುದ್ದೆಗಳನನ್ನು ತೆರವುಗೊಳಿಸುತ್ತೇವೆ ಎಂದು ಕೆಲವು ನಿಗಮಗಳ ಅಧ್ಯಕ್ಷ-ಉಪಾಧ್ಯಕ್ಷರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಒತ್ತಡ ಹೇರಿದ್ದಾರೆ.  ಆದರೆ, ಇದಕ್ಕೆ ಸಿದ್ದರಾಮಯ್ಯ ಅವರು ನಕಾರ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸುಮಾರು 20ಕ್ಕೂ ಹೆಚ್ಚು ನಿಗಮಗಳ ಅಧ್ಯಕ್ಷ-ಉಪಾಧ್ಯಕ್ಷರು ಇಂದು ಖಾಸಗಿ ಹೋಟೆಲ್ನಲ್ಲಿ ಪ್ರತ್ಯೇಕ ಸಭೆ ನಡೆಸಿ ಸಿದ್ದರಾಮಯ್ಯ ಅವರ ಮೇಲೆ ಒತ್ತಡ ಹೇರುವ ಪ್ರಯತ್ನ ನಡೆಸಿದ್ದಾರೆ.

ಮುಖ್ಯಮಂತ್ರಿ ಅವರು ತಮ್ಮ ಆಪ್ತ ಬೆಂಬಲಿಗರ ಅಧಿಕಾರಾವಧಿಯನ್ನು ವಿಸ್ತರಣೆ ಮಾಡಿ ಆದೇಶ ಹೊರಡಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.  ಎಲ್ಲರಿಗೂ ಏಕರೂಪ ನ್ಯಾಯ ಅನುಸರಿಸಬೇಕು. ಬೆಂಬಲಿಗ ರಿಗೆ ಮಾತ್ರ ಅಧಿಕಾರ ವಿಸ್ತರಣೆ ಮಾಡುವುದು, ಉಳಿದವರನ್ನು ನಿರ್ಲಕ್ಷಿಸುವುದು ಸರಿಯಲ್ಲ ಎಂಬ ಅಸಮಾಧಾನ ವ್ಯಕ್ತವಾಗಿದೆ. ಅಗತ್ಯಬಿದ್ದರೆ ಈ ಬಗ್ಗೆ ದೆಹಲಿಗೆ ತೆರಳಿ ಹೈಕಮಾಂಡ್ಗೆ ದೂರು ನೀಡುವ ಸಾಧ್ಯತೆ ಇದೆ ಎಂದು ನಾಯಕರು ತಿಳಿಸಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin