‘ನಿಮ್ಮನ್ನು ನೀವು ಬೆಂಗಳೂರಿನ ಬಾಸ್ ಅಂದುಕೊಳ್ಳಬೇಡಿ’ : ರೈಲ್ವೆ ಅಧಿಕಾರಿಗಳಿಗೆ ಡಿವಿಎಸ್ ತರಾಟೆ

ಈ ಸುದ್ದಿಯನ್ನು ಶೇರ್ ಮಾಡಿ

Sadanadagowda

ಬೆಂಗಳೂರು, ಸೆ.10-ನಿಮ್ಮನ್ನು ನೀವು ಬೆಂಗಳೂರಿನ ಬಾಸ್ ಎಂದು ತಿಳಿದುಕೊಳ್ಳಬೇಡಿ, ಕರ್ತವ್ಯದಿಂದ ನುಣುಚಿಕೊಳ್ಳಬೇಡಿ ಎಂದು ಕೇಂದ್ರ ಸಾಂಖ್ಯಿಕ ಹಾಗೂ ಕಾರ್ಯಕ್ರಮ ಅನುಷ್ಠಾನ ಸಚಿವ ಡಿ.ವಿ.ಸದಾನಂದಗೌಡ ಅವರು, ರೈಲ್ವೆಅಧಿಕಾರಿಗಳನ್ನು ಇಂದು ತರಾಟೆಗೆ ತೆಗೆದುಕೊಂಡರು. ನಗರದ ಮೆಜೆಸ್ಟಿಕ್ ಬಳಿ ಇರುವ ನೈರುತ್ಯ ರೈಲ್ವೆ ವಿಭಾಗೀಯ ಕಚೇರಿಯಲ್ಲಿ ನಡೆದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವರು ರೈಲ್ವೆ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಸಂಜಯ್ ಅಗರವಾಲ್ ಅವರನ್ನು ಉದ್ದೇಶಿಸಿ ಮಾತನಾಡಿದ ಗೌಡರು, ನಿಮ್ಮನ್ನು ನೀವು ಬೆಂಗಳೂರಿಗೆ ಬಾಸ್ ಅಂದುಕೊಳ್ಳಬೇಡಿ ಎಂದು ಎಚ್ಚರಿಸಿದರು. ರೈಲ್ವೆಗೆ ಸಂಬಂಧಿಸಿದ ಜಾಗಗಳನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವುದು ನಿಮ್ಮ ಕರ್ತವ್ಯ. ಕೇಂದ್ರ ಸರ್ಕಾರದ ಸ್ವಚ್ಛತಾ ಅಭಿಯಾನ ನನ್ನ ಲೋಕಸಭಾ ಕ್ಷೇತ್ರದಲ್ಲಿ ಯಶಸ್ವಿಯಾಗಬೇಕು ಎಂದು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.

ರೈಲ್ವೆ ಹಳಿಗಳ ಮೇಲೆ ಕಸ ಹಾಕುವವರ ಮೇಲೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡಿದರು. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಬಾಕಿ ಉಳಿದಿರುವ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು. ಸಭೆಯಲ್ಲಿ ಕೃಷಿ ಸಚಿವ ಕೃಷ್ಣಭೈರೇಗೌಡ, ಶಾಸಕರಾದ ಡಾ.ಅಶ್ವತ್ಥನಾರಾಯಣ, ವೈ.ಎ.ನಾರಾಯಣಸ್ವಾಮಿ, ವಿಶ್ವನಾಥ್, ಮುನಿರಾಜು ಸೇರಿದಂತೆ ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

► Follow us on –  Facebook / Twitter  / Google+

Facebook Comments

Sri Raghav

Admin