ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಇಬ್ಬರು ವಿದ್ಯಾರ್ಥಿಗಳು ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Accident--01 ಬೆಳಗಾವಿ, ನ.5-ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿ ಓರ್ವ ಗಂಭೀರ ಗಾಯಗೊಂಡಿರುವ ಘಟನೆ ಹಿರೇಬಾಗೇವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಿಹಾರದ ಪಾಟ್ನಾ ಮೂಲದ ನಿಶಾ(22), ಜಯಂತ್ ರಾಯ್(22) ಮೃತಪಟ್ಟ ವಿದ್ಯಾರ್ಥಿಗಳು. ಇವರು ಜಿಲ್ಲೆಯ ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಓಕ್ಸ್ ವ್ಯಾಗಾನ್ ಕಾರಿನಲ್ಲಿ ಹುಬ್ಬಳ್ಳಿಯಿಂದ ಬೆಳಗಾವಿಗೆ ತೆರಳುತ್ತಿದ್ದ ವೇಳೆ ಜಿಲ್ಲೆಯ ಹೊರವಲಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಹೊಡೆದಿದೆ.

ನಿಶಾ, ಜಯಂತ್ ರಾಯ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಮತ್ತೊಬ್ಬ ವಿದ್ಯಾರ್ಥಿ ಅನಸುಮಾನ್ ಕುಮಾರ್ ಗಂಭೀರ ಗಾಯಗೊಂಡಿದ್ದಾನೆ. ಈತನನ್ನು ಜಿಲ್ಲೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸ್ ಇನ್‍ಸ್ಪೆಕ್ಟರ್ ಸಿ.ಎಸ್.ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin