ನಿವೃತ್ತ ಅಧಿಕಾರಿ ಆಸ್ತಿ ಮುಟ್ಟುಗೋಲು

ಈ ಸುದ್ದಿಯನ್ನು ಶೇರ್ ಮಾಡಿ

D

ಬೆಂಗಳೂರು, ಸೆ.7-ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಕ್ಕಿ ಹಾಕಿಕೊಂಡಿದ್ದ ಕರ್ನಾಟಕ ನಿವೃತ್ತ ಅಧಿಕಾರಿಯೊಬ್ಬರ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡಿದೆ. ಕಲಬುರಗಿಯ ನೀರಾವರಿ ನಿಗಮ ಸಂಸ್ಥೆಯಲ್ಲಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಆಗಿ ನಿವೃತ್ತಿ ಹೊಂದಿದ್ದ ಚಂದ್ರಶೇಖರ್ ಕಿಕ್ಕೇರಿ ಅವರಿಗೆ ಸೇರಿದ ಮನೆಯ ಕಟ್ಟಡ, ಕೃಷಿ ಜಮೀನು ಹಾಗೂ ಬ್ಯಾಂಕ್ ಖಾತೆ ಸೇರಿದಂತೆ ಸುಮಾರು 70 ಲಕ್ಷ ರೂ. ಮೌಲ್ಯದ ಆಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ.  ಭ್ರಷ್ಟಾಚಾರ ಮತ್ತು ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಪೊಲೀಸರು ಫೆಬ್ರವರಿ ತಿಂಗಳಲ್ಲಿ ಎಫ್‍ಐಆರ್ ದಾಖಲಿಸಿ ತನಿಖೆ ನಡೆಸಿದಾಗ ಭ್ರಷ್ಟಾಚಾರವೆಸಗಿ ಅಕ್ರಮ ಹಣ ಸಂಪಾದನೆ ಮಾಡಿರುವುದು ಸಾಬೀತಾಗಿತ್ತು.

► Follow us on –  Facebook / Twitter  / Google+

Facebook Comments

Sri Raghav

Admin