ನಿವೃತ್ತ ಐಎಎಸ್ ಅಧಿಕಾರಿಯ ಮನೆಯಲ್ಲಿ ಕಳ್ಳತನ

ಈ ಸುದ್ದಿಯನ್ನು ಶೇರ್ ಮಾಡಿ

Rob

ಬೆಂಗಳೂರು,ಆ.8-ನಿವೃತ್ತ ಐಎಎಸ್ ಅಧಿಕಾರಿಯ ಮನೆಯ ಹಿಂಬಾಗಿಲು ಮೀಟಿ ಒಳನುಗ್ಗಿದ ಚೋರರು ಐದು ಲಕ್ಷ ನಗದು ಹಾಗೂ ಒಂದು ಲಕ್ಷ ಮೌಲ್ಯದ ಆಭರಣ ದೋಚಿರುವ ಘಟನೆ ಬಾಣಸವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.   ನಿವೃತ್ತ ಐಎಎಸ್ ಅಧಿಕಾರಿ ಜಾಮ್‍ದಾರ್ ಪ್ರಸ್ತುತ ಅಮೆರಿಕದಲ್ಲಿದ್ದು , ಪತ್ನಿ ನಗರದ ಎಚ್‍ಬಿಆರ್ ಲೇಔಟ್‍ನ 5ನೇ ಕ್ರಾಸ್, 3ನೇ ಬ್ಲಾಕ್, ಬಾಣಸವಾಡಿಯ ಮನೆಯಲ್ಲಿ ವಾಸವಾಗಿದ್ದಾರೆ.   ಶನಿವಾರ ಬೆಳಗ್ಗೆ ಮನೆಗೆ ಬೀಗ ಹಾಕಿಕೊಂಡು ಇವರ ಪತ್ನಿ ಸಂಬಂಧಿಕರ ಮನೆಗೆ ಹೋಗಿದ್ದರು. ಈ ವೇಳೆ ಕಳ್ಳರು ಇವರ ಮನೆಯ ಹಿಂಬಾಗಿಲು ಮೀಟಿ ಒಳನುಗ್ಗಿ ಬೀರುವನು ಒಡೆದು ಐದು ಲಕ್ಷ ನಗದು ಹಾಗು ಒಂದು ಲಕ್ಷ ಮೌಲ್ಯದ ಆಭರಣ ದೋಚಿ ಪರಾರಿಯಾಗಿದ್ದಾರೆ.

ನಿನ್ನೆ ರಾತ್ರಿ ಇವರ ಪತ್ನಿ ಮನೆಗೆ ವಾಪಸ್ಸಾದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ತಕ್ಷಣ ಬಾಣಸವಾಡಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಶ್ವಾನದಳ ಹಾಗೂ ಬೆರಳಚ್ಚು ತಜ್ಞರೊಂದಿಗೆ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Facebook Comments

Sri Raghav

Admin

Leave a Comments