ನಿಷೇಧಾಜ್ಞೆ ನಡುವೆಯೇ ಮಂಡ್ಯದಲ್ಲಿ ಶಾಲಾ-ಕಾಲೇಜು ಪುನಾರಂಭ

ಈ ಸುದ್ದಿಯನ್ನು ಶೇರ್ ಮಾಡಿ

School

ಮಂಡ್ಯ,ಸೆ.24-ಕಾವೇರಿ ಹೋರಾಟದ ಹಿನ್ನೆಲೆಯಲ್ಲಿ ಕಳೆದ 20 ದಿನಗಳಿಂದ ಜಿಲ್ಲೆಯಾದ್ಯಂತ ಬಂದ್ ಆಗಿದ್ದ ಶಾಲಾ-ಕಾಲೇಜುಗಳು ಇಂದು ನಿಷೇಧಾಜ್ಞೆ ನಡುವೆಯೇ ಪುನಾರಂಭಗೊಂಡಿವೆ. ನಿಷೇಧಾಜ್ಞೆಯನ್ನು ಸೆ.26ರವರೆಗೆ ವಿಸ್ತರಿಸಲಾಗಿದೆ. ತಮಿಳುನಾಡಿಗೆ ನೀರು ಹರಿಸದಿರಲು ನಿನ್ನೆ ಸರ್ಕಾರದ ತೆಗೆದುಕೊಂಡ ನಿರ್ಣಯದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸ್ವಲ್ಪ ಮಟ್ಟಿಗೆ ಸಹಜ ಸ್ಥಿತಿ ಉಂಟಾಗಿದ್ದು , ಜಿಲ್ಲಾಧಿಕಾರಿ ಜಿಯಾವುಲ್ಲಾ ಅವರು ಇಂದು ಶಾಲಾ ಕಾಲೇಜುಗಳನ್ನು ಆರಂಭಿಸುವಂತೆ ಸೂಚಿಸಿದ್ದಾರೆ.  ನೀರು ಹರಿಸುವಂತೆ ಸುಪ್ರೀಂಕೋರ್ಟ್ ತೀರ್ಪು (ಸೆ.5ರಿಂದ) ನೀಡಿದಾಗಿನಿಂದ ಶಾಲಾ-ಕಾಲೇಜುಗಳು ಬಂದ್ ಆಗಿದ್ದವು.

ದಸರೆ ರಜೆಯನ್ನು ಕೂಡ ಕಡಿತ ಮಾಡಿ ತರಗತಿಗಳನ್ನು ನಡೆಸುವಂತೆ ಜಿಲ್ಲಾಧಿಕಾರಿ ಜಿಯಾವುಲ್ಲಾ ಸೂಚನೆ ನೀಡಿದ್ದಾರೆ. ಮಂಡ್ಯ ನಿಧಾನವಾಗಿ ಸಹಜ ಸ್ಥಿತಿಗೆ ಬರುತ್ತಿದೆ. ಆದರೂ ಕಾವೇರಿ ಹಿತರಕ್ಷಣಾ ಸಮಿತಿ ಮಾತ್ರ ತನ್ನ ಪ್ರತಿಭಟನೆಯನ್ನು ಮುಂದುವರೆಸಿದ್ದು , ಇಂದು ಚಿತ್ರದುರ್ಗ ಬೃಹನ್ಮಠದ ಮುರುಘ ಶರಣರು ಸೇರಿದಂತೆ ಹಲವು ಸ್ವಾಮೀಜಿಗಳು ಪಾಲ್ಗೊಂಡಿದ್ದರು.

► Follow us on –  Facebook / Twitter  / Google+

Facebook Comments

Sri Raghav

Admin