ನೀತಿ ಸಂಹಿತೆ ಉಲ್ಲಂಘನೆ : ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು

ಈ ಸುದ್ದಿಯನ್ನು ಶೇರ್ ಮಾಡಿ

Siddaramaiah

ಮೈಸೂರು, ಮೇ 12- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀತಿ ಸಂಹಿತೆ ಉಲ್ಲಂಘಿಸಿರುವ ಬಗ್ಗೆ ದೂರು ನೀಡಿದ್ದೇನೆ ಎಂದು ಚಾಮುಂಡೇಶ್ವರಿ ಜೆಡಿಎಸ್ ಅಭ್ಯರ್ಥಿ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿನ ಬೂತ್‍ನಲ್ಲಿ ಮತಚಲಾಯಿಸಿ ಮಾತನಾಡಿದ ಅವರು, ಉನ್ನತ ಹುದ್ದೆಯಲ್ಲಿರುವ ಮುಖ್ಯಮಂತ್ರಿಗಳು ನೀತಿ ಸಂಹಿತೆ ಬಗ್ಗೆ ತಿಳಿದಿಲ್ಲವೇ ಎಂದು ಪ್ರಶ್ನಿಸಿದರು. (ರಾಜ್ಯ  ವಿಧಾನಸಭಾ ಚುನಾವಣೆ : ಮತದಾನದ Live Updates )

ನೀತಿ ಸಂಹಿತೆ ಜಾರಿಯಲ್ಲಿದ್ದರೂ ಮನೆ ಮನೆಗೆ ತೆರಳಿ ಪ್ರಚಾರ ನಡೆಸುವಾಗ ಕೇವಲ 10 ಮಂದಿ ಮಾತ್ರ ಜತೆಯಲ್ಲಿರುವಂತೆ ಕಟ್ಟುನಿಟ್ಟಿನ ಆದೇಶವಿದ್ದರೂ ಸಿದ್ದರಾಮಯ್ಯ ಅವರು ತಮ್ಮೊಂದಿಗೆ 100ರಿಂದ 200 ಮಂದಿಯನ್ನು ಕರೆದುಕೊಂಡು ಹೋಗಿ ಪ್ರಚಾರ ಮಾಡಿದ್ದಾರೆ. ನೀತಿ ಸಂಹಿತೆ ಉಲ್ಲಂಘಿಸಿರುವ ಅವರ ವಿರುದ್ಧ ದೂರು ನೀಡಿದ್ದೇನೆ ಎಂದರು. ಇಂದು ಬೂತ್‍ನಲ್ಲಿ ಮೊದಲ ಮತವನ್ನು ತಮ್ಮ ಪತ್ನಿ ಲಲಿತಾ ಚಲಾಯಿಸಿದರು. ನಾನು ಎರಡನೇ ಮತ ಚಲಾಯಿಸಿದೆ. ನನ್ನ ಪುತ್ರಿ ಯಶೋಧಾ ಮೂರನೆ ಮತ ಚಲಾಯಿಸಿದ್ದಾರೆ ಎಂದು ನುಡಿದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin