ನೀರು ಬಿಡದೆ ಇರುವುದು ನ್ಯಾಯಾಂಗ ನಿಂದನೆ ಆಗುವುದಿಲ್ಲ : ಸಿದ್ದರಾಮಯ್ಯ ವಿಶ್ವಾಸ

ಈ ಸುದ್ದಿಯನ್ನು ಶೇರ್ ಮಾಡಿ

Siddaramaiha-Jai

ನವದೆಹಲಿ, ಸೆ.30- ತಮಿಳುನಾಡಿಗೆ ನೀರು ಬಿಡದೆ ಇರುವುದು ನ್ಯಾಯಾಂಗ ನಿಂದನೆಯಾಗುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಡಿಯುವ ನೀರಿನ ಉದ್ದೇಶಕ್ಕಾಗಿ ಮಾತ್ರ ಕಾವೇರಿ ಕೊಳ್ಳದ ನೀರನ್ನು ಬಳಸಿಕೊಳ್ಳಲು ವಿಧಾನಮಂಡಲದಲ್ಲಿ ಸರ್ವಾನುಮತದ ನಿರ್ಣಯ ಕೈಗೊಳ್ಳಲಾಗಿದೆ. ನಮಗೆ ವಿಧಾನಮಂಡಲದ ನಿರ್ಣಯ ಪಾಲನೆಯೂ ಮುಖ್ಯವಾಗಿದೆ.  ಅಸಾಧ್ಯವಾದ ಪರಿಸ್ಥಿತಿಯಲ್ಲಿ ನ್ಯಾಯಾಲಯದ ಆದೇಶವನ್ನು ಪಾಲಿಸಲಾಗುತ್ತಿಲ್ಲ. ಅನಿವಾರ್ಯವಾಗಿ ವಿಧಾನಮಂಡಲದ ನಿರ್ಣಯಕ್ಕೆ ಬದ್ಧರಾಗಿದ್ದೇವೆ. ಹಾಗೆಂದ ಮಾತ್ರಕ್ಕೆ ನ್ಯಾಯಾಂಗಕ್ಕೆ ಅಗೌರವ ತೋರಿಸುವುದು ನಮ್ಮ ಉದ್ದೇಶವಲ್ಲ ಎಂದು ಅವರು ಹೇಳಿದರು.

ಸುಪ್ರೀಂಕೋರ್ಟ್‍ನ ಆದೇಶ ಪಾಲಿಸಿಲ್ಲ ಎಂಬ ಕಾರಣಕ್ಕೆ ನ್ಯಾಯಾಂಗ ನಿಂದನೆಯಾಗುವುದಿಲ್ಲ. ತಜ್ಞರ ತಂಡ ಕಳುಹಿಸಿ ಎರಡು ರಾಜ್ಯಗಳ ಕಾವೇರಿ ಕೊಳ್ಳದ ವಾಸ್ತವ ಸ್ಥಿತಿಗತಿಯನ್ನು ಅಧ್ಯಯನ ಮಾಡಿಸುವಂತೆಯೂ ನಾವು ಮನವಿ ಮಾಡಿದ್ದೇವೆ ಎಂದು ಅವರು ಹೇಳಿದರು.

► Follow us on –  Facebook / Twitter  / Google+

Facebook Comments

Sri Raghav

Admin