ನೀರು ಹರಿಸದಿದ್ದರೆ ಪ್ರತಿಭಟನೆಯ ಎಚ್ಚರಿಕೆ

ಈ ಸುದ್ದಿಯನ್ನು ಶೇರ್ ಮಾಡಿ

gubbi

ಗುಬ್ಬಿ, ಸೆ.17- ತಾಲೂಕಿನ ಕಡಬ, ನಿಟ್ಟೂರು, ಬೆಲವತ್ತ, ಪುರ ಸೇರಿದಂತೆ ಈ ಭಾಗದ ಕೆರೆಗಳಿಗೆ ಸೆ.19ರೊಳಗೆ ಹೇಮಾವತಿ ನೀರು ಹರಿಸದಿದ್ದರೆ ಅಂದು ನಿಟ್ಟೂರು ಸರ್ಕಲ್ ಬಳಿ ಈ ಭಾಗದ ಸಾವಿರಾರು ರೈತರು ಪ್ರತಿಭಟನೆ ನಡೆಸಲಿದ್ದಾರೆ ಎಂದು ಜಿಪಂ ಸದಸ್ಯ ಹೆಚ್.ಟಿ.ಕೃಷ್ಣಪ್ಪ ಎಚ್ಚರಿಕೆ ನೀಡಿದರು.ಅಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಕೆರೆಗಳಿಗೆ ನೀರು ಹರಿಸುವ ಬಗ್ಗೆ ಚರ್ಚಿಸಲಾಗುವುದು. ಅಧಿಕಾರಿಗಳು ಸ್ಪಂದಿಸಿ ಕೆರೆಗಳಿಗೆ ಹೇಮಾವತಿ ನೀರು ಹರಿಸದಿದ್ದರೆ ಪಕ್ಷಾತೀತವಾಗಿ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದ ಅವರು, ಕುಡಿಯುವ ನೀರಿಗೂ ಪ್ರತಿಭಟನೆ ನಡೆಸುವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಕೂಡಲೆ ಹೇಮಾವತಿ ನೀರನ್ನು ಕೆರೆಗಳಿಗೆ ಹರಿಸುವತ್ತ ಅಧಿಕಾರಿಗಳು ಹೆಚ್ಚಿನ ಗಮನ ನೀಡುವಂತೆ ಒತ್ತಾಯಿಸಿದರು.
ಜಿಪಂ ಮಾಜಿ ಸದಸ್ಯ ಪಿ.ಬಿ.ಚಂದ್ರಶೇಖರಬಾಬು ಮಾತನಾಡಿ, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ನೀರು ಹರಿಸುವ ವಿಚಾರದಲ್ಲಿ ಆಗುತ್ತಿರುವ ಅನ್ಯಾಯದ ಬಗ್ಗೆ ಗಮನ ಹರಿಸಬೇಕು. ನಮ್ಮ ಪಾಲಿನ ನೀರು ನೀಡಿ ಎಂದು ರೈತರು ಕೇಳುತ್ತಿದ್ದಾರೆ. ಸಂಬಂಧಿಸಿದ ಅಧಿಕಾರಿಗಳು ತ್ವರಿತವಾಗಿ ತಾಲೂಕಿನ ಕಡಬ, ಪುರ, ನಿಟ್ಟೂರು, ಬೆಲªತ್ತ ಕೆರೆಗಳಿಗೆ ಹೇಮಾವತಿ ನೀರು ಹರಿಸುವಂತೆ ಒತ್ತಾಯಿಸಿದರು.
ರೈತ ಮುಖಂಡ ಬೆಣಚಿಗೆರೆ ಪಂಚಾಕ್ಷರಿ ಮಾತನಾಡಿ, ಸೋಮವಾರದೊಳಗೆ ನಮ್ಮ ಭಾಗದ ಕೆರೆಗಳಿಗೆ ನೀರು ಹರಿಸದಿದ್ದರೆ ಈ ಭಾಗದ ರೈತರು ತೀವ್ರತರ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ರೈತರ ಸಭೆಯಲ್ಲಿ ನಿಟ್ಟೂರು ಗ್ರಾಪಂ ಉಪಾಧ್ಯಕ್ಷ ನರಸಯ್ಯ, ಮಾಜಿ ಸದಸ್ಯ ಗಿರೀಶ್, ಮುಖಂಡರಾದ ಪಾರ್ಥಸಾರಥಿ, ಚಂದ್ರಮಳಿ, ಕೆ.ಮತ್ತಿಘಟ್ಟದ ಚೆನ್ನಿಗಪ್ಪ, ಪುರದ ಪ್ರಭುಪ್ರಸಾದ್, ತೊರೆಹಳ್ಳಿ ಜಯಣ್ಣ ಹಾಗೂ ನೂರಾರು ರೈತರು ಹಾಜರಿದ್ದರು.

 

► Follow us on –  Facebook / Twitter  / Google+

Facebook Comments

Sri Raghav

Admin