ನೇಣುಬಿಗಿದುಕೊಂಡು ಪಾನೀಪುರಿ ವ್ಯಾಪಾರಿ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

suicide

ತುಮಕೂರು, ಸೆ.1-ಪಾನೀಪುರಿ ವ್ಯಾಪಾರ ಮಾಡುತ್ತಿದ್ದ ಯುವಕ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ತಡವಾಗಿ ಬೆಳಕಿಗೆ ಬಂದಿದೆ.ಯಾದಗಿರಿ ಜಿಲ್ಲೆಯ ಹೆಬ್ಬಾಳು ಗ್ರಾಮದ ವಾಸಿ ಸಿದ್ದರಾಜು (23) ಆತ್ಮಹತ್ಯೆ ಮಾಡಿಕೊಂಡ ಯುವಕ.  ಈತ ಮೂಲತಃ ಯಾದಗಿರಿ ಜಿಲ್ಲೆಯವನಾಗಿದ್ದು, ಕಳೆದ ಎರಡು ವರ್ಷಗಳ ಹಿಂದೆ ತುಮಕೂರಿಗೆ ಬಂದು ನೆಲೆಸಿದ್ದ. ಕಳೆದ ಒಂದು ತಿಂಗಳ ಹಿಂದೆಯಷ್ಟೇ ಉಪ್ಪಾರಹಳ್ಳಿಯ ಇಂದಿರಾ ಕಾಲೇಜಿನ ಬಳಿಯ ಮನೆಯೊಂದನ್ನು ಮಾಡಿಕೊಂಡಿದ್ದ ಈತ ಪಾನೀಪುರಿ ವ್ಯಾಪಾರ ಮಾಡುತ್ತಿದ್ದ.
ಕಳೆದ 5 ದಿನಗಳ ಹಿಂದೆಯೇ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಯಾರಿಗೂ ತಿಳಿದಿರಲಿಲ್ಲ. ಇಂದು ಮನೆಯ ಬಳಿ ದುರ್ವಾಸನೆ ಬರುತಿದ್ದುದ್ದನ್ನು ಕಂಡ ಸ್ಥಳೀಯರು ಅನುಮಾನಗೊಂಡು ಜಯನಗರ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಪಿಎಸ್‍ಐ ಪಾರ್ವತಮ್ಮ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

 

► Follow us on –  Facebook / Twitter  / Google+

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin