ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಳಗಾವಿ, ಮೇ 26- ಹಿರೇಬಾಗೇವಾಡಿ ಗ್ರಾಮದ ಎಪಿಎಂಸಿ ಆವರಣದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ ಪತ್ತೆಯಾಗಿದೆ. ಗೋಕಾಕ್ ತಾಲೂಕಿನ ಅಡಿವೆಪ್ಪನ ಅಂಕಲಗಿ ಗ್ರಾಮದ ಶಿವಕುರ್ಮಾ ಬಲರಾಮ್ ಉಪ್ಪಾರ (19) ಮೃತ ಯುವಕನಾಗಿದ್ದಾನೆ.

ಮೃತ ಶಿವಕುಮಾರ್ ಕಳೆದ ಕೆಲವು ತಿಂಗಳಿನಿಂದ ಸಾಮಾಜಿಕ ಹೋರಾಟದಲ್ಲಿ ಭಾಗಿಯಾಗುತ್ತಿದ್ದ .ಜತೆಗೆ ಹಿಂದೂ ಪರ ಸಂಘಟನೆಗಳೊಂದಿಗೆ ಶಿವಕುರ್ಮಾ ಗುರುತಿಸಿಕೊಂಡು ಕೆಲದಿನಗಳ ಹಿಂದೆ ಗೋಕಾಕ್‍ನಿಂದ ಕೇರಳಕ್ಕೆ ಗೋವುಗಳನ್ನು ಸಾಗಾಣಿಕೆ ಮಾಡುತ್ತಿರುವುದನ್ನು ಗಮನಿಸಿ ಅದನ್ನು ತಡೆಯಲು ಯತ್ನಿಸಿದ್ದ.

ಇದರಿಂದ ಕುಪಿತರಾಗಿದ್ದ ಗೋವು ಸಾಗಾಣಿಕೆದಾರರು ಈತನನ್ನು ಕೊಂದು, ಕುಣಿಕೆಗೇರಿಸಿ, ಆತ್ಮಹತ್ಯೆ ಎಂಬಂತೆ ಬಿಂಬಿಸಲು ಯತ್ನಿಸಿರಬಹುದು ಎಂಬ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ