ನೇರಳೆ ಗ್ರಾಮದ ಶಾಲೆಯಲ್ಲಿ ಬಿಸಿಯೂಟ ಸೇವನೆಯಿಂದ ಮಕ್ಕಳು ಅಸ್ವಸ್ಥ

ಈ ಸುದ್ದಿಯನ್ನು ಶೇರ್ ಮಾಡಿ

nanjana-gudu-makkalu-aswast
ನಂಜನಗೂಡು, ಆ.24- ತಾಲೂಕಿನ ನೇರಳೆ ಗ್ರಾಮದ ಪ್ರಾಥಮಿಕ ಶಾಲಾ ಮಕ್ಕಳು ಮಧ್ಯಾಹ್ನದ ಬಿಸಿಯೂಟ ಸೇವಿಸಿದ ನಂತರ ಹೊಟ್ಟೆನೋವು ಮತ್ತು ವಾಂತಿ ಕಾಣಿಸಿಕೊಂಡು ಅಸ್ವಸ್ಥರಾಗಿ ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ.  ಸುಮಾರು 35ಕ್ಕೂ ಹೆಚ್ಚು ಮಕ್ಕಳು ಬಿಸಿಯೂಟ ಸೇವಿಸಿದ ನಂತರ ಎಲ್ಲರೂ ಹೊಟ್ಟೆನೋವು ಮತ್ತು ವಾಂತಿಯಿಂದ ನರಳುತ್ತಿದ್ದು, ತೀವ್ರ ಅಸ್ವಸ್ತಗೊಂಡಾಗ ಅಲ್ಲಿನ ಶಿಕ್ಷಕರು ಗ್ರಾಮಸ್ಥರ ಸಹಾಯದಿಂದ ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಿ ಅಪಾಯದಿಂದ ಪಾರಾಗುವಂತೆ ಮಾಡಿದ್ದಾರೆ. ಆಸ್ಪತ್ರೆಯಲ್ಲಿದ್ದ ಮಕ್ಕಳ ತಜ್ಞ ಡಾ.ಮಹದೇವಮೂರ್ತಿ ಮಕ್ಕಳ ಬಗ್ಗೆ ಹೆಚ್ಚಿನ ಗಮನಹರಿಸಿ ಸೂಕ್ತ ಚಿಕಿತ್ಸೆ ನೀಡುವುದರ ಮೂಲಕ ಮಕ್ಕಳು ಯಾವುದೇ ಪ್ರಾಣಾಪಾಯವಿಲ್ಲದೆ ಶೀಘ್ರ ಗುಣಮುಖರಾಗಿದ್ದಾರೆ.

ಆಸ್ಪತ್ರೆ ಆಡಳಿತಾಧಿಕಾರಿ ಡಾ.ಪುಟ್ಟತಾಯಮ್ಮ, ಮಕ್ಕಳ ತಜ್ಞ ಡಾ.ಮಹದೇವಮೂರ್ತಿ, ತಾಲೂಕು ಆರೋಗ್ಯಾಧಿಕಾರಿ ಡಾ.ಕಲಾವತಿ ಮಾತನಾಡಿ, ಮಕ್ಕಳಿಗೆ ಕಬ್ಬಿಣಾಂಶದ ಕೊರತೆಯಿಂದಾಗಿ ಕಬ್ಬಿಂಣಾಶದ ಮಾತ್ರೆಗಳನ್ನು ಎಲ್ಲ ಶಾಲಾ ಮಕ್ಕಳಿಗೆ ನೀಡುತ್ತಿದ್ದು, ಅದರಂತೆಯೆ ನೇರಳೆ ಗ್ರಾಮದ ಪ್ರಾಥಮಿಕ ಶಾಲೆಯ 150ಕ್ಕೂ ಹೆಚ್ಚಿನ ಮಕ್ಕಳಿಗೆ ಮಾತ್ರೆ ನೀಡಲಾಗಿದ್ದು, ಅವರಲ್ಲಿ 35ಮಕ್ಕಳು ಅಸ್ವಸ್ಥರಾಗಿದ್ದು, ಇದೀಗ ಚೇತರಿಸಿಕೊಂಡಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin