ನೋಟು ಗೊಂದಲ ಸರಿಪಡಿಸಲು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮನವಿ

ಈ ಸುದ್ದಿಯನ್ನು ಶೇರ್ ಮಾಡಿ

PARMESHWAR
ಬೆಂಗಳೂರು, ನ.15-ಕೇಂದ್ರ ಸರ್ಕಾರದ ನೋಟು ನಿಷೇಧದ ಕ್ರಮದಿಂದ ಜನಸಾಮಾನ್ಯರಿಗೆ ತೊಂದರೆಯಾಗಿದೆ. ಎಲ್ಲಾ ಗೊಂದಲಗಳಿಗೂ ಕೇಂದ್ರವೇ ಕಾರಣ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಇಂದಿಲ್ಲಿ ಹೇಳಿದರು.ಆಸ್ಪತ್ರೆಗಳಲ್ಲಿ ಹಳೆಯ ನೋಟುಗಳನ್ನು ಪಡೆದುಕೊಳ್ಳುತ್ತಿಲ್ಲ. ಹೀಗಾಗಿ ರೋಗಿಗಳ ಚಿಕಿತ್ಸೆಗೆ ತೊಂದರೆಯಾಗಿದೆ. ಕೇಂದ್ರ ಸರ್ಕಾರ ಎಲ್ಲಾ ಆಸ್ಪತ್ರೆಗಳಲ್ಲಿ ನ.24ರವರೆಗೂ ಹಳೆಯ ನೋಟುಗಳನ್ನು ಸ್ವೀಕರಿಸಲು ಸೂಚಿಸಿದೆ. ಆದರೆ ಖಾಸಗಿ ಆಸ್ಪತ್ರೆಗಳಿಗೆ ಈ ಬಗ್ಗೆ ಗೈಡ್‍ಲೈನ್ಸ್ ಇಲ್ಲ. ಈ ಎಲ್ಲಾ ಗೊಂದಲಗಳಿಗೆ ಕೇಂದ್ರವೇ ನೇರ ಹೊಣೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡಲಾಗುತ್ತದೆ. ಖಾಸಗಿ ಆಸ್ಪತ್ರೆಗಳಲ್ಲಿ ಹಳೆಯ ನೋಟುಗಳನ್ನು ಪಡೆಯಬೇಕು ಎಂದು ಸೂಚಿಸಿದ್ದೇವೆ. 2ಸಾವಿರದ ಹೊಸ ನೋಟಿನಿಂದ ಯಾವುದೇ ಪ್ರಯೋಜನವಿಲ್ಲ. 500ರ ಹೊಸ ನೋಟು ಚಲಾವಣೆಗೆ ತನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ ಎಂದರು. ನನಗೆ ವೈಯಕ್ತಿಕವಾಗಿ ಚಿಲ್ಲರೆ ಸಮಸ್ಯೆ ಇಲ್ಲ. 20 ಸಾವಿರ ಹಣ ವಿತ್ ಡ್ರಾ ಮಾಡಿದ್ದೇನೆ. ನನ್ನ ಜೇಬಿನಲ್ಲೇ ಇಟ್ಟುಕೊಂಡಿದ್ದೇನೆ ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.ಬನ್ನೇರುಘಟ್ಟ ರಸ್ತೆಯಲ್ಲಿರುವ ಸಾಗರ್ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಸಮಸ್ಯೆ ಆಲಿಸಿ ಹಣ್ಣು ಹಂಪಲು ವಿತರಿಸಿದರು. ನಂತರ ಜಯನಗರದ ಬ್ಯಾಂಕ್ ಆಫ್ ಬರೋಡಾದ ಮುಂದೆ ಹಣ ಪಡೆಯಲು ಕ್ಯೂ ನಿಂತಿದ್ದ ಜನರ ಸಮಸ್ಯೆಯನ್ನು ಆಲಿಸಿದರು. ಆಮೇಲೆ ಜಯನಗರ ಬಿಬಿಎಂಪಿ ವಾಣಿಜ್ಯ ಮಳಿಗೆಗೆ ಭೇಟಿ ನೀಡಿ ವ್ಯಾಪಾರಿಗಳು, ಗ್ರಾಹಕರ ಸಮಸ್ಯೆಗಳನ್ನು ಕೇಳಿದರು. ನೋಟ್ ಬ್ಯಾನ್‍ನಿಂದ ಬಿಸಿನೆಸ್ ಡಲ್ ಆಗಿದೆ. ಎಲ್ಲಿ ಹೋದ್ರು ಚಿಲ್ಲರೆ ಸಮಸ್ಯೆ ಉಂಟಾಗಿದೆ. ಅಂಗಡಿಗಳಲ್ಲಿ 500 ಮತ್ತು 1000 ನೋಟುಗಳನ್ನು ಸ್ವೀಕರಿಸುತ್ತಿಲ್ಲ ಎಂದು ತಮ್ಮ ಅಳಲು ತೋಡಿಕೊಂಡರು.

 

► Follow us on –  Facebook / Twitter  / Google+

Facebook Comments

Sri Raghav

Admin