ನೋಟ್ ಬ್ಯಾನ್’ನಿಂದ 74 ಜನ ಸತ್ತರೂ ಕೇಂದ್ರ ಸಂತಾಪ ಸೂಚಿಸಿಲ್ಲ

ಈ ಸುದ್ದಿಯನ್ನು ಶೇರ್ ಮಾಡಿ

Paytm-Rahul-Modi--01

ನವದೆಹಲಿ, ಡಿ.8-ಕೇಂದ್ರ ಸರ್ಕಾರದ ನೋಟು ನಿಷೇಧದಿಂದಾಗಿ ಈವರೆಗೆ 74 ಮಂದಿ ಮೃತಪಟ್ಟಿದ್ದಾರೆ. ಆದರೆ ಅವರಿಗೆ ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಶ್ರದ್ಧಾಂಜಲಿ ಸಲ್ಲಿಸುವ ಕನಿಷ್ಠ ಸೌಜನ್ಯವನ್ನು ತೋರಿಸಿಲ್ಲ ಎಂದು ಸಂಸದ ಎಸ್.ಪಿ. ಮುದ್ದಹನುವೇಗೌಡ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನೋಟು ರದ್ದತಿ ವಿರುದ್ಧ ಸಂಸತ್ ಆವರಣದ ಗಾಂಧಿ ಪ್ರತಿಮೆ ಮುಂದೆ ಇಂದು ಕಾಂಗ್ರೆಸ್ ನೇತೃತ್ವದಲ್ಲಿ ನಡೆದ ಧರಣಿ ವೇಳೆ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ನೋಟು ರದ್ದು ಮಾಡಿದ ಇಂದಿಗೆ ಸರಿಯಾಗಿ ಒಂದು ತಿಂಗಳಾಯಿತು. ದೇಶದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ ಈ ಬಗ್ಗೆ ಸಂಸತ್ತಿನಲ್ಲಿ ಚರ್ಚೆಗೆ ಕೇಂದ್ರ ಅವಕಾಶ ನೀಡಿಲ್ಲ ಎಂದು ಅವರು ಟೀಕಿಸಿದ್ದಾರೆ.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin