ನ್ಯಾಯಾಂಗವನ್ನು ದುರ್ಬಲಗೊಳಿಸಬೇಡಿ : ನ್ಯಾ.ಕರ್ಣನ್ ವಿರುದ್ಧ ಜೇಠ್ಮಲಾನಿ ವಾಗ್ದಾಳಿ

ಈ ಸುದ್ದಿಯನ್ನು ಶೇರ್ ಮಾಡಿ

Karnan--01

ನವದೆಹಲಿ, ಮಾ.13-ನ್ಯಾಯಾಂಗ ವ್ಯವಸ್ಥೆಯನ್ನು ಕಟುವಾಗಿ ಟೀಕಿಸಿರುವ ಕಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿ ಸಿ.ಎಸ್.ಕರ್ಣನ್ ವಿರುದ್ಧ ಹಿರಿಯ ವಕೀಲ ಮತ್ತು ಕೇಂದ್ರದ ಮಾಜಿ ಸಚಿವ ರಾಮ್ ಜೇಠ್ಮಲಾನಿ ವಾಗ್ದಾಳಿ ನಡೆಸಿದ್ದಾರೆ. ನೀವು ಹೇಳಿರುವ ಪ್ರತಿಯೊಂದು ಪದಗಳನ್ನು ಬೇಷರತ್ ವಾಪಸ್ ತೆಗೆದುಕೊಳ್ಳುವಂತೆ ಅವರು ಸಲಹೆ ಮಾಡಿದ್ದಾರೆ.   ಈ ಕುರಿತು ನ್ಯಾ. ಕರ್ಣನ್ ಅವರಿಗೆ ಬಹಿರಂಗ ಪತ್ರ ಬರೆದಿರುವ ಅವರು, ಭ್ರಷ್ಟಾಚಾರ ಪ್ರಾಬಲ್ಯವಿರುವ ಈ ದೇಶದಲ್ಲಿ, ನ್ಯಾಯಾಂಗ ಮಾತ್ರ ಜನರನ್ನು ರಕ್ಷಿಸುವ ಏಕೈಕ ವ್ಯವಸ್ಥೆಯಾಗಿದೆ. ಅದನ್ನು ನಾಶಗೊಳಿಸಬೇಡಿ ಅಥವಾ ದುರ್ಬಲಗೊಳಿಸಬೇಡಿ ಎಂದು ತಿಳಿಸಿದ್ದಾರೆ.

ನ್ಯಾಯಾಲಯ ನಿಂದನೆ ಪ್ರಕರಣದಲ್ಲಿ ಮಾರ್ಚ್ 31ರಂದು ಖುದ್ದಾಗಿ ಹಾಜರಾಗಬೇಕೆಂದು ಸುಪ್ರೀಂಕೋರ್ಟ್ ನ್ಯಾ. ಕರ್ಣನ್ ಅವರಿಗೆ ಜಾಮೀನು ಸಹಿತ ವಾರೆಂಟ್ ಹೊರಡಿಸಿತ್ತು. ಈ ಪ್ರಕರಣಕ್ಕೂ ಮುನ್ನ ಮತ್ತು ನಂತರ ನ್ಯಾಯಾಂಗ ವ್ಯವಸ್ಥೆಯನ್ನು ಕಟುವಾಗಿ ಟೀಕಿಸಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin