ನ್ಯಾಷನಲ್ ಪಬ್ಲಿಕ್ ಶಾಲೆ ವಿರುದ್ಧ ಸಂಘಟನೆಗಳ ಪ್ರತಿಭಟನೆ

ಈ ಸುದ್ದಿಯನ್ನು ಶೇರ್ ಮಾಡಿ

School

ಬೆಂಗಳೂರು, ಆ.9- ನಗರದ ನ್ಯಾಷನಲ್ ಪಬ್ಲಿಕ್ ಸ್ಕೂಲ್‍ನಲ್ಲಿ ಆರ್‍ಟಿಇ ಯೋಜನೆಯಡಿ ಮಕ್ಕಳಿಗೆ ಪ್ರವೇಶ ನೀಡದೆ ಅನ್ಯಾಯ ಮಾಡಲಾಗುತ್ತಿದೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ಮಾಡಲು ತೆರಳಿದ್ದ ಖಾಸಗಿ ವಾಹಿನಿ ವರದಿಗಾರರು ಮತ್ತು ಕ್ಯಾಮೆರಾ ಮನ್‍ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿವಿಧ ಸಂಘಟನೆಗಳವರು ಶಾಲೆ ಮುಂದೆ ಪ್ರತಿಭಟನೆ ನಡೆಸಿದರು.  ಶಿವರಾಮೇಗೌಡ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆ, ಹಿರಿಯ ಪತ್ರಕರ್ತ ಮಳ್ಳಳ್ಳಿ ಸೂರಿ ನೇತೃತ್ವದ ಜನಪರ ವೇದಿಕೆಯ ಕಾರ್ಯಕರ್ತರು ಶಾಲೆ ಮುಂದೆ ಪ್ರತಿಭಟನೆ ನಡೆಸಿ ಆರ್‍ಟಿಇ ಯೋಜನೆಯಡಿ ಬಡ ಮಕ್ಕಳಿಗೆ ಸೀಟು ನೀಡದೆ ಶಾಲೆಯವರು ಅನ್ಯಾಯ ಮಾಡಿದ್ದಾರಲ್ಲದೆ ಸರ್ಕಾರಿ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಶಾಲಾ ಮುಖ್ಯಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಅಲ್ಲದೆ, ಶಾಲಾ ಆಡಳಿತ ಮಂಡಳಿಯವರು ನಡೆಸಿದ ಈ ಅನ್ಯಾಯದ ವಿರುದ್ಧ ವರದಿ ಮಾಡಲು ತೆರಳಿದ್ದ ಖಾಸಗಿ ವಾಹಿನಿ ವರದಿಗಾರರು ಮತ್ತು ಕ್ಯಾಮೆರಾಮನ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.  ಪೊಲೀಸರು ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಬಡ ಮಕ್ಕಳಿಗೆ ಪ್ರವೇಶ ದೊರೆಯುತ್ತಿಲ್ಲ.  ಆರ್‍ಟಿಇ ಯೋಜನೆಯನ್ನು ದುರುಪಯೋಗ ಮಾಡಿಕೊಳ್ಳ ಲಾಗುತ್ತಿದೆ. ಈ ಶಾಲೆಯ ಅನ್ಯಾಯದ ವಿರುದ್ಧ ಆಕ್ರೋಶ ಭುಗಿಲೆದ್ದಿತ್ತು. ಶಾಲೆಯ ಈ ವರ್ತನೆ ಖಂಡಿಸಿ ಶಾಲೆ ಎದುರು ಬೃಹತ್ ಪ್ರತಿಭಟನೆ ನಡೆಯಿತು.

Facebook Comments

Sri Raghav

Admin