ನ.11ರವರೆಗೆ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ರದ್ದು : ನಿತಿನ್ ಗಡ್ಕರಿ

ಈ ಸುದ್ದಿಯನ್ನು ಶೇರ್ ಮಾಡಿ

Toll-03

ನವದೆಹಲಿ ನ.09 : ಕೇಂದ್ರ ಸರ್ಕಾರ 500 ಹಾಗೂ 1000 ರುಪಾಯಿ ನೋಟ್ ನಿಷೇಧಿಸಿರುವ ಹಿನ್ನೆಲೆಯಲ್ಲಿ ನವೆಂಬರ್ 11ರ ಮಧ್ಯರಾತ್ರಿಯವರೆಗೆ ದೇಶಾದ್ಯಂತ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹಿಸುವುದನ್ನು ರದ್ದುಗೊಳಿಸಲಾಗಿದೆ ಎಂದು ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಹೇಳಿದ್ದಾರೆ. ಸುಗಮ ಸಂಚಾರಕ್ಕಾಗಿ ನವೆಂಬರ್ 11ರವರೆಗೆ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ರದ್ದುಗೊಳಿಸಲು ನಿರ್ಧರಿಸಲಾಗಿದೆ ಎಂದು ನಿತಿನ್ ಗಡ್ಕರಿ ಅವರು ಟ್ವೀಟ್ ಮಾಡಿದ್ದಾರೆ.

ಮಂಗಳವಾರ ದಿಢೀರ್ ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಕಪ್ಪು ಹಣ, ಭ್ರಷ್ಟಾಚಾರ ಹಾಗೂ ಭಯೋತ್ಪಾದನೆಗೆ ಕುಮ್ಮಕ್ಕು ನೀಡುವ ನಕಲಿ ನೋಟುಗಳ ಹಾವಳಿ ತಡೆಯುವುದಕ್ಕಾಗಿ ಇಂದು ಮಧ್ಯರಾತ್ರಿಯಿಂದಲೇ 500 ಹಾಗೂ 1000 ರುಪಾಯಿ ನೋಟ್ ಗಳಿಗೆ ನಿಷೇಧ ಹೇರಲಾಗಿದೆ ಎಂದು ಘೋಷಿಸಿದ್ದರು.

► Follow us on –  Facebook / Twitter  / Google+

Facebook Comments

Sri Raghav

Admin