ಪಂಜಾಬ್ ಬಿಜೆಪಿಯಲ್ಲಿ ಭುಗಿಲೆದ್ದ ಭಿನ್ನಮತ, ರಾಜ್ಯಾಧ್ಯಕ್ಷ ವಿಜಯ್ ಸಂಪ್ಲಾ ರಾಜೀನಾಮೆ ಬೆದರಿಕೆ

ಈ ಸುದ್ದಿಯನ್ನು ಶೇರ್ ಮಾಡಿ

Vijay-Sampla

ಚಂಡಿಗಢ, ಜ.17- ಕರ್ನಾಟಕದಲ್ಲಿ ಬಿಜೆಪಿ ನಾಯಕರು ಕಿತ್ತಾಡಿ ಪಕ್ಷವನ್ನು ಪೇಚಿಗೆ ಸಿಲುಕಿಸಿರುವ ನಡುವೆಯೇ ಚುನಾವಣೆ ಹೊಸ್ತಿಲಲ್ಲಿರುವ ಪಂಜಾಬ್‍ನಲ್ಲೂ ಕಮಲ ಪಾಳಯಕ್ಕೆ ಇರಿಸು-ಮುರಿಸಾಗುವಂತೆ ಭಿನ್ನಮತ ಸ್ಫೋಟಗೊಂಡಿದೆ. ತಮ್ಮ ಆಪ್ತರಿಗೆ ಚುನಾವಣೆಗಳಲ್ಲಿ ಸ್ಪರ್ಧಿಸಲು ಟಿಕೆಟ್ ನೀಡಲಿಲ್ಲವೆಂದು ತೀವ್ರ ಅಸಮಾಧಾನಗೊಂಡ ಕೇಂದ್ರ ಸಚಿವರೂ ಆದ ವಿಜಯ್ ಸಂಪ್ಲಾ ಮಂತ್ರಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ. ಈ ಬೆಳವಣಿಗೆ ಪಕ್ಷಕ್ಕೆ ಭಾರೀ ಮುಖಭಂಗ ಉಂಟುಮಾಡಿದೆ. ಪಂಜಾಬ್ ವಿಧಾನಸಭೆ ಚುನಾವಣೆಗಾಗಿ ಇನ್ನೂ ಆರು ಅಭ್ಯರ್ಥಿಗಳ ಹೆಸರುಗಳನ್ನು ಬಿಜೆಪಿ ಪ್ರಕಟಿಸಿದ ನಂತರ ನಿನ್ನೆ ರಾತ್ರಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಎಚ್ಚರಿಕೆ ನೀಡಿದ್ದಾರೆ.

ಟಿಕೆಟ್ ಹಂಚಿಕೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವರೂ ಆದ ಸಂಪ್ಲಾ ಈ ಧೋರಣೆ ತಮಗೆ ಬೇಸರ ಉಂಟುಮಾಡಿದ್ದು, ಸಚಿವ ಮತ್ತು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಇವೆರಡಕ್ಕೂ ರಾಜೀನಾಮೆ ನೀಡುತ್ತೇನೆ ಎಂದು ಬೆದರಿಕೆ ಹಾಕಿದ್ದಾರೆ. ಫಗ್ವಾರಾ ವಿಧಾನಸಭೆ ಕ್ಷೇತ್ರದಲ್ಲಿ ತಮ್ಮ ಅಭ್ಯರ್ಥಿಗೆ ಟಿಕೆಟ್ ನೀಡುವ ಬದಲು ಸೋಮ್‍ಪ್ರಕಾಶ್ ಎಂಬುವರಿಗೆ ಅವಕಾಶ ಕಲ್ಪಿಸಿರುವುದು ಸಂಪ್ಲಾ ಬೇಸರಕ್ಕೆ ಕಾರಣವಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin