ಪಕ್ಷಗಳ ದೇಣಿಗೆ ಸಂಬಂಧಪಟ್ಟ ಕಾನೂನು ವರದಿ ಆಯೋಗಕ್ಕೆ ನೀಡಲು ಸುಪ್ರೀಂ ಸೂಚನೆ

ಈ ಸುದ್ದಿಯನ್ನು ಶೇರ್ ಮಾಡಿ

supreme-ocurt

ನವದೆಹಲಿ, ಅ.3- ರಾಜಕೀಯ ದೇಣಿಗೆಗೆ ಸಂಬಂಧಪಟ್ಟ ಕಾನೂನಿಗೆ ಇತ್ತೀಚೆಗೆ ಮಾಡಲಾದ ತಿದ್ದುಪಡಿಗಳನ್ನು ಪ್ರಶ್ನಿಸಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿಗೊಳಿಸಿದೆ. ಈ ಸಂಬಂಧ ಪ್ರತ್ಯುತ್ತರ ನೀಡುವಂತೆ ನಿರ್ದೇಶನ ನೀಡಿದೆ.ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಹಾಗೂ ನ್ಯಾಯಮೂರ್ತಿಗಳಾದ ಎ.ಎಂ.ಕಾನ್ವಿಲ್ಕರ್, ಡಿ.ವೈ.ಚಂದ್ರಚೂಡ್ ಅವರನ್ನೊಳಗೊಂಡ  ಪೀಠ ಈ ಸಂಬಂಧ ನೋಟಿಸ್ ಜಾರಿಗೊಳಿಸಿದೆ.

ಸರ್ಕಾರೇತರ ಸಂಸ್ಥೆಯಾದ ಅಸೋಸಿಯೇಷನ್ ಫಾರ್ ಡೆಮಾಕ್ರೆಟಿಕ್ ರಿಫಾಮ್ರ್ಸ್ (ಎಡಿಆರ್)ಈ ಸಂಬಂಧ ಪಿಐಎಲ್ ಸಲ್ಲಿಸಿತ್ತು. ಈ ಸಂಸ್ಥೆ ಪರವಾಗಿ ಹಿರಿಯ ವಕೀಲ ಪ್ರಶಾಂತ್ ಭೂಷಣ್, ರಾಜಕೀಯ ಪಕ್ಷವೊಂದಕ್ಕೆ ತಮ್ಮ ಸರಾಸರಿ ನಿವ್ವಳ ಆದಾಯದ ಶೇ.7.5ಕ್ಕಿಂತ ಹೆಚ್ಚು ದೇಣಿಗೆ ನೀಡಲು ಕಾರ್ಪೊರೇಟ್ ಸಂಸ್ಥೆಗಳ ಮೇಲೆ ವಿಧಿಸಲಾಗಿದ್ದ ನಿರ್ಬಂಧವನ್ನು ಹೊಸ ತಿದ್ದುಪಡಿಯಲ್ಲಿ ತೆರವುಗೊಳಿಸಲಾಗಿದೆ. ಇದರಿಂದ ರಾಜಕೀಯ ಪಕ್ಷಗಳು ಮೂಲವನ್ನು ಬಹಿರಂಗಗೊಳಿಸದೆ ಚುನಾವಣಾ ಬಾಂಡ್ ಮೂಲಕ ದೇಣಿಗೆ ಮತ್ತು ವಂತಿಗೆಗಳನ್ನು ಸಂಗ್ರಹಿಸಲು ಸಹಕಾರಿಯಾಗುತ್ತದೆ ಎಂದು ಆರೋಪಿಸಿ ಮನವಿ ಸಲ್ಲಿಸಿದ್ದರು.

Facebook Comments

Sri Raghav

Admin