ಪಟ್ಟು ಬಿಡದ ವೈದ್ಯರು : ಸರ್ಕಾರಿ ಆಸ್ಪತ್ರೆಗಳತ್ತ ಮುಖ ಮಾಡಿದ ರೋಗಿಗಳು

ಈ ಸುದ್ದಿಯನ್ನು ಶೇರ್ ಮಾಡಿ

pationts--02

ಬೆಂಗಳೂರು, ನ.16- ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದಿಂದ ಬಹುತೇಕ ರೋಗಿಗಳು ಸರ್ಕಾರಿ ಆಸ್ಪತ್ರೆಗಳತ್ತ ಮುಖ ಮಾಡಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಖಾಸಗಿ ಆಸ್ಪತ್ರೆಗಳ ವೈದ್ಯರು ತಮ್ಮ ಸೇವೆ ಸ್ಥಗಿತಗೊಳಿಸಿ ಬೆಳಗಾವಿಯಲ್ಲಿ ಮುಷ್ಕರ ನಡೆಸುತ್ತಿರುವುದರಿಂದ ಚಿಕಿತ್ಸೆ ಸಿಗದೆ ಪರದಾಡುತ್ತಿರುವ ರೋಗಿಗಳು ಸರ್ಕಾರಿ ಆಸ್ಪತ್ರೆಗಳತ್ತ ದಾವಿಸುತ್ತಿದ್ದಾರೆ. ವೈದ್ಯರ ಮುಷ್ಕರ ನಾಲ್ಕನೆ ದಿನಕ್ಕೆ ಕಾಲಿಟ್ಟಿದ್ದು, ಇಂದು ಒಪಿಡಿಯನ್ನು ಕೂಡ ಬಂದ್ ಮಾಡಲಾಗಿತ್ತು. ಹಾಗಾಗಿ ಬೆಂಗಳೂರು ನಗರ ಸೇರಿದಂತೆ ವಿವಿಧ ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ ರೋಗಿಗಳು ಸರ್ಕಾರಿ ಆಸ್ಪತ್ರೆಗಳತ್ತ ತೆರಳುತ್ತಿದ್ದರು. ಖಾಸಗಿ ವೈದ್ಯರ ಮುಷ್ಕರದ ಹಿನ್ನೆಲೆಯಲ್ಲಿ ವೈದ್ಯರು ಹಾಗೂ ವೈದ್ಯಕೀಯೇತರ ಸಿಬ್ಬಂದಿ ರಜೆ ಪಡೆಯದಂತೆ ಕರ್ತವ್ಯದಲ್ಲಿ ಕಡ್ಡಾಯವಾಗಿ ಹಾಜರಾಗಿರಬೇಕೆಂದು ಸರ್ಕಾರ ಸೂಚನೆ ನೀಡಿದ್ದು, ದಿನದ 24 ಗಂಟೆಯೂ ಆರೋಗ್ಯ ಸೇವೆ ಲಭ್ಯವಿದೆ.

ಖಾಸಗಿ ವ್ಯೆಧ್ಯಕೀಯ ಸಂಸ್ಥೆಗಳ ನಿಯಂತ್ರಣ ಕಾಯಿದೆ ಬೇಕೇ..? ಬೇಡವೇ ?

View Results

ನಗರದ ಕೆಸಿ ಜನರಲ್, ವಿಕ್ಟೋರಿಯಾ, ಬೌರಿಂಗ್, ಘೋಷ್, ಇಎಸ್‍ಐ ಆಸ್ಪತ್ರೆ, ಬಿಬಿಎಂಪಿ ಆಸ್ಪತ್ರೆಗಳು, ಜಿಲ್ಲಾ ಆರೋಗ್ಯ ಕೇಂದ್ರಗಳು, ತಾಲೂಕು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಹೆಚ್ಚಿನ ಆರೋಗ್ಯ ಸೇವೆ ಒದಗಿಸಲಾಗುತ್ತಿದೆ. ಬಹುತೇಕ ಕಡೆ ಮೆಡಿಕಲ್ ಪಿಜಿ ವಿದ್ಯಾರ್ಥಿಗಳು ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ. 25 ಸಾವಿರಕ್ಕೂ ಹೆಚ್ಚು ವೈದ್ಯರು ಮುಷ್ಕರದಲ್ಲಿ ಪಾಲ್ಗೊಂಡಿರುವುದರಿಂದ ಹಾಗೂ ಕಳೆದ ಮೂರು ದಿನಗಳಲ್ಲಿ 25 ಜನರು ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಸಂಭಾವ್ಯ ಅನಾಹುತಗಳನ್ನು ತಪ್ಪಿಸುವ ಕಾರಣ ಮುನ್ನೆಚ್ಚರಿಕೆಯಾಗಿ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ.

Facebook Comments

Sri Raghav

Admin