ಪತಿಯೇ ಸೀಮೆಎಣ್ಣೆ ಸುರಿದು ಪತ್ನಿಯನ್ನು ಕೊಲೆ ಮಾಡಲು ಯತ್ನ
ವಿಜಯಪುರ,ನ.13-ಪತಿಯೇ ಸೀಮೆಎಣ್ಣೆ ಸುರಿದು ಪತ್ನಿಯನ್ನು ಕೊಲೆ ಮಾಡಲು ಯತ್ನಿಸಿದ ಪರಿಣಾಮ ಆಕೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಗರದ ಕಸ್ತೂರಿಬಾ ಕಾಲೋನಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಪತ್ನಿ ಯಮನವ್ವ ಪರಸಪ್ಪ ಪಾನಪಟ್ಟಿ(30) ಸ್ಥಿತಿ ಚಿಂತಾಜನಕವಾಗಿದೆ. ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಈಕೆ ಮೇಲೆ ಪತಿ ಪರಸಪ್ಪ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದಾನೆ. ಯಮನವ್ವ ತೀವ್ರ ಸುಟ್ಟ ಗಾಯಗಳಿಂದ ನರಳುತ್ತಿದ್ದನ್ನು ಕಂಡ ಅಕ್ಕಪಕ್ಕದವರು ಸ್ಥಳಕ್ಕೆ ಧಾವಿಸಿ ಆಕೆಯನ್ನು ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ತೀವ್ರ ಸುಟ್ಟ ಗಾಯಗಳಾಗಿರುವುದರಿಂದ ಯಮನವ್ವ ಬದುಕುವ ಸಾಧ್ಯತೆ ಕಡಿಮೆಯಿದೆ ಎಂದು ಚಿಕಿತ್ಸೆ ನೀಡುತ್ತಿರುವ ವೈದ್ಯರು ತಿಳಿಸಿದ್ದಾರೆ.ಪರಸಪ್ಪ ತನ್ನ ಪತ್ನಿ ಯಮನವ್ವಳ ಸೀಮೆಎಣ್ಣೆ ಸುರಿದು ಕೊಲೆಗೆ ಯತ್ನಿಸಿರುವುದಕ್ಕೆ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ಗೋಲ್ಗುಂಬಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಾರಿಯಾಗಿರುವ ಪರಸಪ್ಪನ ಹುಡುಕಾಟದಲ್ಲಿದ್ದಾರೆ.
► Follow us on – Facebook / Twitter / Google+