ಪತ್ನಿ ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪತಿ

ಈ ಸುದ್ದಿಯನ್ನು ಶೇರ್ ಮಾಡಿ

murder

ದಾವಣಗೆರೆ, ಸೆ.27-ಕೌಟುಂಬಿಕ ಕಲಹದಿಂದ ಬೇಸತ್ತ ಆಟೋ ಚಾಲಕ ಪತ್ನಿಯನ್ನು ಮಚ್ಚಿನಿಂದ ಕೊಲೆ ಮಾಡಿ, ನಂತರ ತಾನೂ ಕುತ್ತಿಗೆ ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹದಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಲೋಕಿಕೆರೆ ಗ್ರಾಮದ ನಿವಾಸಿ ಸವಿತಾ (34) ಕೊಲೆಯಾದ ಪತ್ನಿಯಾಗಿದ್ದು, ಮಂಜುನಾಥ(39) ಆತ್ಮಹತ್ಯೆಗೆ ಯತ್ನಿಸಿದ ಆಟೋ ಚಾಲಕ.ಮಂಜುನಾಥ ಆಟೋ ಚಾಲಕನಾಗಿದ್ದು, ಸವಿತಾ ಜೊತೆ 10 ವರ್ಷಗಳ ಹಿಂದೆಯೇ ವಿವಾಹವಾಗಿತ್ತು. ನಿನ್ನೆ ಸಂಜೆ ದಂಪತಿ ನಡುವೆ ಜಗಳ ನಡೆದಿದ್ದು, ಇದು ವಿಕೋಪಕ್ಕೆ ತಿರುಗಿದಾಗ ಪತಿ ಮಚ್ಚಿನಿಂದ ಪತ್ನಿಯನ್ನು ಕೊಲೆ ಮಾಡಿದ್ದಾರೆ.

ನಂತರ ಆತನನ್ನು ಮಚ್ಚಿನಿಂದ ಕತ್ತು ಕುಯ್ದು ಕೊಂಡಿದ್ದಾನೆ. ತಕ್ಷಣ ಸುದ್ದಿ ತಿಳಿದ ಅಕ್ಕಪಕ್ಕದ ಮನೆಯವರು ಆತನನ್ನು ಚಿಗಟೇರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಆತನ ಸ್ಥಿತಿ ಚಿಂತಾಜನಕವಾಗಿದೆ.ದಂಪತಿಗೆ ಎರಡು ಹೆಣ್ಣು, ಒಂದು ಗಂಡು ಮಗುವಿದೆ. ಸ್ಥಳಕ್ಕೆ ಪಿಎಸ್‍ಐ ರವೀಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ್ ಗುಳ್ಳೇದ್ ಸ್ಥಳ ಪರಿಶೀಲನೆ ನಡೆಸಿದರು.

► Follow us on –  Facebook / Twitter  / Google+

Facebook Comments

Sri Raghav

Admin