ಪತ್ರ ಬರೆದಿಟ್ಟು ನೇಣಿಗೆ ಶರಣಾದ ಶಿಕ್ಷಕ

ಈ ಸುದ್ದಿಯನ್ನು ಶೇರ್ ಮಾಡಿ

HANG-SUCIDE
ತುಮಕೂರು, ಫೆ.28- ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಶಿಕ್ಷಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಕೋಳಾಲ ಹೋಬಳಿ ಪಾತಗಾನಹಳ್ಳಿ ಗ್ರಾಮ ಪಂಚಾಯಿತಿಯ ಕ್ಯಾತಗಾನಹಳ್ಳಿ ಗ್ರಾಮದ ಶಿಕ್ಷಕನಾಗಿದ್ದ ಕಾಮರಾಜು (45) ಆತ್ಮಹತ್ಯೆ ಮಾಡಿಕೊಂಡಿರುವ ಶಿಕ್ಷಕ.

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಇವರು ಆತ್ಮಹತ್ಯೆಗೂ ಮುನ್ನ ಪತ್ರ ಬರೆದಿಟ್ಟು ಗ್ರಾಮದ ಹೊರವಲಯದ ತಮ್ಮ ಜಮೀನಿನಲ್ಲಿದ್ದ ಬೇವಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಸುದ್ದಿ ತಿಳಿದ ಕೊರಟಗೆರೆ ತಾಲೂಕಿನ ಕೋಳಾಲ ಪೊಲೀಸ್ ಠಾಣೆ ಪಿಎಸ್‍ಐ ಸಂತೋಷ್ ಭೇಟಿ ನೀಡಿ ಪರಿಶೀಲನೆ ನಡೆಸಿ ಶವವನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ.

Facebook Comments

Sri Raghav

Admin