ಪದ್ಮಭೂಷಣ ಪ್ರಶಸ್ತಿಗೆ ಪಿ.ವಿ.ಸಿಂಧು ಹೆಸರು ಶಿಫಾರಸು

ಈ ಸುದ್ದಿಯನ್ನು ಶೇರ್ ಮಾಡಿ

Sindhu

ನವದೆಹಲಿ, ಸೆ.25- ಕೊರಿಯಾ ಬ್ಯಾಡ್ಮಿಂಟನ್ ಚಾಂಪಿಯನ್ ಆಗಿರುವ ಪಿ.ವಿ.ಸಿಂಧು ಅವರ ಹೆಸರನ್ನು ಕೇಂದ್ರ ಕ್ರೀಡಾ ಸಚಿವಾಲಯ ಪದ್ಮಭೂಷಣ ಪ್ರಶಸ್ತಿಗೆ ಶಿಫಾರಸು ಮಾಡಿದೆ. ಪಿ.ವಿ.ಸಿಂಧು ಅವರು ವಿಯೋ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದು ದೇಶದ ಕೀರ್ತಿ ಎತ್ತಿ ಹಿಡಿದಿದ್ದರು. ಇತ್ತೀಚೆಗೆ ಕೊರಿಯಾ ಬ್ಯಾಡ್ಮಿಂಟನ್ ಚಾಂಪಿಯನ್ ಆಗಿ ಕ್ರೀಡಾ ಕ್ಷೇತ್ರದಲ್ಲಿ ಹೊಸ ಸಂಚಲನ ಮೂಡಿಸಿದ್ದರು. ಈ ಹಿನ್ನೆಲೆಯಲ್ಲಿ ಅವರಿಗೆ ಈ ಬಾರಿ ಪದ್ಮಭೂಷಣ ಪ್ರಶಸ್ತಿ ನೀಡುವಂತೆ ಕ್ರೀಡಾ ಸಚಿವಾಲಯ ಸರ್ಕಾರಕ್ಕೆ ಶಿಫಾರಸು ಮಾಡಿದೆ.

 

Facebook Comments

Sri Raghav

Admin